Monday, March 2, 2026
Homeಟಾಪ್ ನ್ಯೂಸ್ಕರ್ನಾಟಕ ಚುನಾವಣೆ: 125 ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

ಕರ್ನಾಟಕ ಚುನಾವಣೆ: 125 ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

ನವದೆಹಲಿ: ಇಂದು ನಡೆದ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ಮುಕ್ತಾಯಗೊಂಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಸುಮಾರು ಮೂರು ಗಂಟೆಗಳ ಕಾಲ ನಡೆದ ಸಭೆ ಮುಗಿದಿದೆ. ರಾಜ್ಯ ನಾಯಕರು ಶಿಫಾರಸು ಮಾಡಿದ ಅಭ್ಯರ್ಥಿಗಳ ಪಟ್ಟಿ ಕುರಿತು ಸುದೀರ್ಘ ಚರ್ಚೆ ನಡೆಸಿದ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ 125 ಅಭ್ಯರ್ಥಿಗಳ ಹೆಸರು ಫೈನಲ್ ಮಾಡಿದೆ.

ಆದರೆ ಇಂದೇ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗುತ್ತೆ ಎಂದು ಕಾತುರದಿಂದ ಕಾಯುತ್ತಿದ್ದ ಕಾರ್ಯಕರ್ತರು ಹಾಗೂ ಅಭ್ಯರ್ಥಿಗಳು ಇನ್ನೂ ಮೂರು ದಿನಗಳ ಕಾಲ ಕಾಯಬೇಕಿದೆ. ಮಾರ್ಚ್‌ ೨೦ರಂದು ಬೆಳಗಾವಿಯ ಯುವಕ್ರಾಂತಿ ಸಮಾವೇಶಕ್ಕೆ ರಾಹುಲ್‌ ಗಾಂಧಿ ಆಗಮಿಸುತ್ತಿದ್ದು, ಕಾರ್ಯಕ್ರಮದ ನಂತರ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುತ್ತೆ ಎನ್ನಲಾಗಿದೆ.

ಹೆಚ್ಚಿನ ಸುದ್ದಿ