Monday, March 2, 2026
Homeಚುನಾವಣೆ 2023ಬೆಂಗಳೂರಿಗೆ ಹೊರಟ ಶೆಟ್ಟರ್ - ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ

ಬೆಂಗಳೂರಿಗೆ ಹೊರಟ ಶೆಟ್ಟರ್ – ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ

ಹುಬ್ಬಳ್ಳಿ: ಸಂಜೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದು, ಬಿಜೆಪಿಯ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ . ಕಾಂಗ್ರೆಸ್ ಸೇರ್ಪಡೆ ಬಗ್ಗೆ ಬೆಂಗಳೂರಿಗೆ ಹೋದ ಮೇಲೆ ನಿರ್ಧಾರ ಕೈಗೊಳ್ಳಲಿದ್ದೇನೆ ಎಂದು ಜಗದೀಶ್ ಶೆಟ್ಟರ್ ನುಡಿದಿದ್ದಾರೆ
ಭಾನುವಾರ ಬೆಳಗ್ಗೆ ಶಿರಸಿಯಲ್ಲಿ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಜಗದೀಶ್ ಶೆಟ್ಟರ್ ಈ ತೀರ್ಮಾನ ಕೈಗೊಂಡಿದ್ದಾರೆ.

ಬೆಂಗಳೂರಿನಲ್ಲಿಯೂ ಹಲವರೊಡನೆ ನಾನು ಚರ್ಚೆ ನಡೆಸಬೇಕಿದೆ. ಬಿಜೆಪಿಯಲ್ಲಿ ಇದ್ದಾಗಲೇ ಸ್ವತಂತ್ರ್ಯ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಲು ಕಾನೂನಿನಲ್ಲಿ ತೊಡಕುಗಳಿವೆ ಎಂದ ಜಗದೀಶ್ ಶೆಟ್ಟರ್, ಸಂಘದ ಹಿರಿಯರೂ ಸಹ ಕರೆ ಮಾಡಿ ಚರ್ಚೆ ನಡೆಸಿದ್ದಾರೆ. ಹಂತಹಂತವಾಗಿ ನಾನು ನಿರ್ಧಾರ ತೆಗೆದುಕೊಳ್ಳಲಿದ್ದೇನೆ ಎಂದರು.

ಈಗಲೂ ನನಗೆ ಟಿಕೆಟ್ ನೀಡುವುದು ಸಣ್ಣ ವಿಷಯ. ಪಕ್ಷ ನನಗೆ ಎಲ್ಲವನ್ನೂ ನೀಡಿರುವುದು ನಿಜ. ಆದರೆ ಅದಕ್ಕೆ ಪ್ರತಿಯಾಗಿ ನಾನೂ ಸಹ ಪಕ್ಷವನ್ನು ಕಟ್ಟಿ ಬೆಳೆಸಿದ್ದೇನೆ ಎಂದ ಜಗದೀಶ್ ಶೆಟ್ಟರ್, ನನ್ನ ಬಗ್ಗೆ ಮಾತನಾಡುವ ಯಡಿಯೂರಪ್ಪ ಅವರು ಬಿಜೆಪಿಯನ್ನೇ ಒಡೆದು ಕೆಜೆಪಿ ಕಟ್ಟಿರಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಶಾಮನೂರು ಗಣೇಶ್ ಅಣಿಮಾಡಿರುವ ಹೆಲಿಕ್ಯಾಪ್ಟರ್‌ನಲ್ಲಿ ಜಗದೀಶ್ ಶೆಟ್ಟರ್ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.

ಹೆಚ್ಚಿನ ಸುದ್ದಿ