ಬೆಂಗಳೂರು: ತನ್ನದೇ ನೂತನ ಪಕ್ಷ ಕಟ್ಟಿಕೊಂಡು ಚುನಾವಣೆ ಕಾರ್ಯದಲ್ಲಿ ಬ್ಯುಸಿ ಆಗಿರುವ ಗಣಿಧಣಿ ಜನಾರ್ದನ ರೆಡ್ಡಿಗೆ ಕೋರ್ಟ್ ಶಾಕ್ ನೀಡಿದೆ. ಅಕ್ರಮ ಅದಿರು ಮಾರಾಟ ಪ್ರಕರಣದಲ್ಲಿ ಕ್ರಿಮಿನಲ್ ಕೇಸ್ ದಾಖಲು ಮಾಡಲು ಜನಪ್ರತಿನಿಧಿಗಳ ಕೋರ್ಟ್ ಆದೇಶಿಸಿದೆ.
ಅಕ್ರಮವಾಗಿ ಗಣಿ ಅದಿರು ಮಾರಾಟ ಪ್ರಕರಣದಲ್ಲಿ ಐಒ ಮಂಜುನಾಥ್ ಅಣ್ಣಿಗೇರಿ ಖಾಸಗಿ ದೂರು ಸಲ್ಲಿಸಿದ್ದರು. ಈ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯ ಗಾಲಿ ಜನಾರ್ದನ ರೆಡ್ಡಿ ಹಾಗೂ ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರ ಸೇರಿ 16 ಮಂದಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಸೂಚನೆ ನೀಡಿದೆ.
