Monday, March 2, 2026
Homeಚುನಾವಣೆ 2023ಮತ್ತೆ ಜೆಡಿಎಸ್ ಐದು ಅಭ್ಯರ್ಥಿಗಳ ಘೋಷಣೆ

ಮತ್ತೆ ಜೆಡಿಎಸ್ ಐದು ಅಭ್ಯರ್ಥಿಗಳ ಘೋಷಣೆ

ಬೆಂಗಳೂರು: ಚುನಾವಣೆಗೆ ಇನ್ನು ಕೆಲವೇ ವಾರಗಳು ಬಾಕಿಯಿರುವಂತೆಯೇ ಜೆಡಿಎಸ್ ಪಕ್ಷದಿಂದ ಮತ್ತೆ ಐವರು ಅಭ್ಯರ್ಥಿಗಳನ್ನು ಜೆಡಿಎಸ್ ವರಿಷ್ಠ ಕುಮಾರಸ್ವಾಮಿ ಶನಿವಾರ ಘೋಷಿಸಿದ್ದಾರೆ. ಇದುವರೆಗೂ ಜೆಡಿಎಸ್ ಪಕ್ಷದಿಂದ 142 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.
ಚಿತ್ರದುರ್ಗಕ್ಕೆ ವಿಧಾನ ಪರಿಷತ್ ಮಾಜಿ ಸದಸ್ಯ ರಘು ಆಚಾರ್, ಮಡಿಕೇರಿಗೆ ಎನ್.ಎಂ. ಮುತ್ತಪ್ಪ, ಮೂಡಬಿದಿರಿಗೆ ಅಮರಶ್ರೀ, ವರುಣಾ ಕ್ಷೇತ್ರಕ್ಕೆ ಮಾಜಿ ಶಾಸಕ ಡಾ. ಭಾರತೀ ಶಂಕರ್, ಬಾಗಲಕೋಟೆ ಕ್ಷೇತ್ರಕ್ಕೆ ದೇವರಾಜ್ ಪಾಟೀಲ್ ಹಾಗೂ ಯಾದಗಿರಿ ಕ್ಷೇತ್ರಕ್ಕೆ ಮಾಜಿ ಸಚಿವ ಎ.ಬಿ.ಮಾಲಕರೆಡ್ಡಿ ಆಯ್ಕೆಯಾಗಿದ್ದಾರೆ.

ಹೆಚ್ಚಿನ ಸುದ್ದಿ