Tuesday, July 8, 2025
Homeಟಾಪ್ ನ್ಯೂಸ್ಇಂದು ಸಂಜೆ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

ಇಂದು ಸಂಜೆ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

ರಾಮನಗರ: ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯು ಇಂದು ಸಂಜೆ ( ಸೋಮವಾರ) ಬಿಡುಗಡೆ ಆಗಲಿದೆ. ಹಾಸನ ಕ್ಷೇತ್ರದ ಟಿಕೆಟ್ ಅನ್ನು ದೇವೇಗೌಡರು ಫೈನಲ್ ಮಾಡಲಿದ್ದಾರೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಚನ್ನಪಟ್ಟಣದಲ್ಲಿ ಸೋಮವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ಹಾಸನ ವಿಚಾರದಲ್ಲಿ ನನ್ನ ನಿಲುವು ಬದಲಾಗುವುದಿಲ್ಲ. ಹಾಸನದಲ್ಲಿ ಜನಾಭಿಪ್ರಾಯ ಹಾಗೂ ಕಾರ್ಯಕರ್ತರ ಅಭಿಪ್ರಾಯವನ್ನು ಪರಿಗಣಿಸಲಾಗುತ್ತದೆ ಎಂದರು. ಜೆಡಿಎಸ್ ನಲ್ಲಿ ಹಾಸನ ಟಿಕೆಟ್ ಗೊಂದಲಕ್ಕೆ ಸಿಲುಕಿದ್ದು, ಈ ಪಟ್ಟಿ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಬೀಳಲಿದೆ.

ಸಾತನೂರಿನಲ್ಲಿ ಜಾನುವಾರು ಸಾಗಣೆ ಮಾಡುತ್ತಿದ್ದವರ ಮೇಲೆ ದಾಳಿ ಮಾಡಿರುವ ಪುನೀತ್ ಹಾಗೂ ಸಹಚರರನ್ನು ಕೂಡಲೇ ಬಂಧಿಸಬೇಕು ಎಂದು ಅವರು ಆಗ್ರಹಿಸಿದರು.

ಹೆಚ್ಚಿನ ಸುದ್ದಿ