ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಶಕುನಿ ಇದ್ದಂತೆ, ಕೊನೆಗೆ ಪಾಂಡವರೇ ಗೆಲ್ಲುವುದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೀಡಿದ ಹೇಳಿಕೆಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ತಿರುಗೇಟು ನೀಡಿದ್ದಾರೆ
ಮುಖ್ಯಮಂತ್ರಿ ಬೊಮ್ಮಾಯಿ ಓರ್ವ ಕಾಮನ್ಮ್ಯಾನ್, ಸಿಂಪಲ್ಮ್ಯಾನ್. ಯಾರೂ ಕೂಡಾ ಅವರ ಬದ್ಧತೆ ಪ್ರಶ್ನಿಸಲು ಸಾಧ್ಯವಿಲ್ಲ ಎಂದು ಅರುಣ್ ಸಿಂಗ್ ಹೇಳಿದರು. ಸಿಎಂ ಬಸವರಾಜ ಬೊಮ್ಮಾಯಿ ಶಕುನಿ ಇದ್ದಂತೆ, ಕೊನೆಗೆ ಪಾಂಡವರೇ ಗೆಲ್ಲುವುದು ಎಂಬ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಹೇಳಿಕೆಗೆ ತಿರುಗೇಟು ನೀಡಿದ ಅವರು, ಇಂತಹ ಅವಹೇಳನಕಾರಿ ಹೇಳಿಕೆ ಕಾಂಗ್ರೆಸ್ನ ವರ್ತನೆ ತೋರಿಸುತ್ತದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಗೆ ಮಾತನಾಡುತ್ತಾರೋ ಅವರ ಪಕ್ಷದ ಸುರ್ಜೇವಾಲಾ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕೂಡ ಅದೇ ರೀತಿಯಲ್ಲಿ ಮಾತಾಡುತ್ತಿದ್ದಾರೆ. ಎಸ್ಟಿ ಸಮುದಾಯದ ಹಿರಿಯ ನಾಯಕರಾಗಿರುವ ಸಚಿವ ಶ್ರೀರಾಮುಲುಗೆ ಸಿದ್ದರಾಮಯ್ಯ ಪೆದ್ದ ಎಂದು ಹೇಳಿದ್ದರು. ಈಗ ಬೊಮ್ಮಾಯಿಗೆ ಅಪಮಾನ ಮಾಡುತ್ತಿದ್ದಾರೆ. ಒಬ್ಬ ಮುಖ್ಯಮಂತ್ರಿಗೆ ಆದ ಅವಮಾನವಲ್ಲ ಬದಲಿಗೆ ಕರ್ನಾಟಕದ ಜನರಿಗೆ ಮಾಡಿದ ಅಪಮಾನವಾಗಿದೆ. ಹೀಗಾಗಿ ರಾಜ್ಯದ ಜನ ಚುನಾವಣೆಯಲ್ಲಿ ಕಾಂಗ್ರೆಸ್ಗೆ ತಕ್ಕ ಉತ್ತರ ಕೊಡುತ್ತಾರೆ ಎಂದರು.