Monday, March 2, 2026
Homeಚುನಾವಣೆ 2023ಸ್ವತಂತ್ರ ಅಭ್ಯರ್ಥಿಯಾಗಿ ಕೆಜಿಎಫ್ ಬಾಬು ನಾಮಪತ್ರ ಸಲ್ಲಿಕೆ

ಸ್ವತಂತ್ರ ಅಭ್ಯರ್ಥಿಯಾಗಿ ಕೆಜಿಎಫ್ ಬಾಬು ನಾಮಪತ್ರ ಸಲ್ಲಿಕೆ

ಬೆಂಗಳೂರು: ಕಾಂಗ್ರೆಸ್ ಟಿಕೆಟ್ ವಂಚಿತ ಕೆಜಿಎಫ್ ಬಾಬು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ವಿಧಾನಸಭಾ ಚುನಾವಣಾ ಸಿದ್ಧತೆಯಲ್ಲಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಕೆಜಿಎಫ್‌ ಬಾಬುಗೆ ಐಟಿ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ಕೆಜಿಎಫ್‌ ಬಾಬು ಅವರ ನಿವಾಸ, ಕಚೇರಿ ಮೇಲೆ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ 2 ಸಾವಿರಕ್ಕೂ ಹೆಚ್ಚು ಡಿಮಾಂಡ್‌ ಡ್ರಾಫ್ಟ್‌ (ಡಿಡಿ) ಹಾಗೂ 5 ಸಾವಿರ ರೇಷ್ಮೆ ಸೀರೆಗಳು ಪತ್ತೆಯಾಗಿವೆ.

ಅಲ್ಲದೇ, ಉಮ್ರಾ ಫೌಂಡೇಷನ್‌ ಹೆಸರಿನಲ್ಲಿದ್ದ ತಲಾ 1,105 ರೂ. ಮೌಲ್ಯದ ಡಿಡಿಗಳು ಮತ್ತು ತಲಾ ಸುಮಾರು 5 ಸಾವಿರ ರೂ. ಬೆಲೆಯ ರೇಷ್ಮೆ ಸೀರೆಗಳನ್ನು ಚುನಾವಣಾ ಪ್ರಚಾರ ಸಾಮಗ್ರಿ ಜತೆ ಇರಿಸಲಾಗಿತ್ತು. ಡಿಡಿಗಳಲ್ಲಿ ಚಿಕ್ಕಪೇಟೆ ಕ್ಷೇತ್ರದ ಮತದಾರರ ಹೆಸರು ನಮೂದಿಸಲಾಗಿತ್ತು ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೆಲ್ಲದರ ನಡುವೆ ಇಂದು ಸ್ವತಂತ್ರ ಅಭ್ಯರ್ಥಿಯಾಗಿ ಕೆಜಿಎಫ್ ಬಾಬು ನಾಮಪತ್ರ ಸಲ್ಲಿಸಿದ್ದಾರೆ.

ಹೆಚ್ಚಿನ ಸುದ್ದಿ