ಬೆಂಗಳೂರು: ಕನಕಪುರ ಹಾಗೂ ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಠಕ್ಕರ್ ಕೊಡಲು ಮುಂದಾಗಿರುವ ಬಿಜೆಪಿ ಅಸ್ತ್ರಕ್ಕೆ ಪ್ರತ್ಯಸ್ತ್ರವಾಗಿ ಕಾಂಗ್ರೆಸ್ ಕೆಲ ಕ್ಷೇತ್ರಗಳಲ್ಲಿ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಯೋಚಿಸಿದೆ.
ಕನಕಪುರದಲ್ಲಿ ಡಿ.ಕೆ ಶಿವಕುಮಾರ್ ವಿರುದ್ಧ ಆರ್.ಅಶೋಕ್ ಹಾಗೂ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ವಿ.ಸೋಮಣ್ಣರನ್ನು ಕಣಕ್ಕಿಳಿಸಿರುವ ಬಿಜೆಪಿಯ ಕೆಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬಲಿಷ್ಟ ಅಭ್ಯರ್ಥಿ ಕಣಕ್ಕಿಳಿಸಲು ತಯಾರಿ ನಡೆಸಿದೆ
ಸಿಎಂ ಬಸವರಾಜ್ ಬೊಮ್ಮಾಯಿ ಕ್ಷೇತ್ರ ಶಿಗ್ಗಾಂವಿಯಲ್ಲಿ ವಿನಯ್ ಕುಲಕರ್ಣಿ ಕಣಕ್ಕಿಳಿಸಲು ಡಿ.ಕೆ ಶಿವಕುಮಾರ್ ತಂತ್ರ ರೂಪಿಸಿದ್ದಾರೆ. ಇನ್ನು ಆರ್. ಅಶೋಕ್ ಸ್ಪರ್ಧಿಸುತ್ತಿರುವ ಪದ್ಮನಾಭನಗರ ಕ್ಷೇತ್ರದಲ್ಲೂ ಅಶೋಕ್‌ಗೆ ಠಕ್ಕರ್ ನೀಡುವ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ರಂತಂತ್ರ ರೂಪಿಸಿದೆ.
ಈ ಕುರಿತು ಮಾತನಾಡಿದ ಡಿ.ಕೆ ಶಿವಕುಮಾರ್ ವಿನಯ್ ಕುಲಕರ್ಣಿ ಧಾರವಾಡದ ಹೋರಿ.. ಅವರು ಒಬ್ಬ ಸೀರಿಯಸ್ ರಾಜಕಾರಣಿ. ಅವರ ಅಭಿಪ್ರಾಯ ಪಡೆದು ಶಿಗ್ಗಾಂವಿ ಕ್ಷೇತ್ರದಲ್ಲಿ ಸ್ಪರ್ಧೆಯ ವಿಚಾರ ನಿರ್ಧರಿಸುತ್ತೇನೆ. ಇನ್ನು ಪದ್ಮನಾಭನಗರ ಕ್ಷೇತ್ರದಲ್ಲಿ ಇಗಾಗಲೇ ರಘುನಾಥ್ ನಾಯ್ಡು ನಮ್ಮ ಅಭ್ಯರ್ಥಿಯಾಗಿದ್ದು, ಡಿ.ಕೆ ಸುರೇಶ್‌ಗೆ ಟಿಕೆಟ್ ನೀಡಬೇಕೆಂಬ ಒತ್ತಾಯವಿದೆ. ಈ ಬಗ್ಗೆಯೂ ಚರ್ಚೆ ಮಾಡ್ತೀನಿ ಅಂದ್ರು.
