Monday, July 7, 2025
Homeಟಾಪ್ ನ್ಯೂಸ್ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್ ಇನ್ನಿಲ್ಲ

ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್ ಇನ್ನಿಲ್ಲ

ಮಾಜಿ ಸಂಸದ ಆರ್ ಧೃವನಾರಾಯಣ್ ವಿಧಿವಶರಾಗಿದ್ದಾರೆ. ಇಂದು ಬೆಳಿಗ್ಗೆ ಮೈಸೂರಿನಲ್ಲಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಹೃದಯಾಘಾತ ಸಭವಿಸಿ ಮೃತಪಟ್ಟಿದ್ದಾರೆ.

ಇಂದು ಮುಂಜಾನೆ ತೀವ್ರವಾದ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೈಸೂರಿನ ಒಂಟಿಕೊಪ್ಪಲಿನ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲೆ ಧೃವನಾರಾನಣ್ ಅಸುನೀಗಿದ್ದಾರೆ.

ಚಾಮರಾಜನಗರ ಕ್ಷೇತ್ರದಿಂದ ೨ ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಅವರು ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ವಿ.ಶ್ರೀನಿವಾಸ್ ಪ್ರಸಾದ್ ಎದರು ಸೋಲನುಭವಿಸಿದ್ರು. ನಂತರ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ರು. ಈಬಾರಿಯ ವಿಧಾನಸಭೆ ಚುನಾವಣೆಯಲ್ಲಿ ನಂಜನಗೂಡು ಕ್ಷೇತ್ರದಿಂದ ಸ್ಪರ್ಧಿಸಲು ಅವರು ತಯಾರಿ ನಡೆಸುತ್ತಿದ್ರು

ಹೆಚ್ಚಿನ ಸುದ್ದಿ