ಚಿಕ್ಕಬಳ್ಳಾಪುರ: ರಾಜ್ಯ ಚುನಾವಣೆ ಹಿನ್ನೆಲೆ ಟಿಕೆಟ್ ಹಂಚಿಕೆ ವಿಚಾರವಾಗಿ ಬಿಜೆಪಿಯಲ್ಲಿ ಅಸಮಾದಾನ ಭುಗಿಲೆದ್ದಿದೆ. ಈ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದೀಗ ಬಿಜೆಪಿ ಮತ್ತಷ್ಟು ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಭವಿಷ್ಯವಿಲ್ಲ. ಈ ಚುನಾವಣೆಯಲ್ಲಿ ಬಿಜೆಪಿಗೆ 50-60 ಸ್ಥಾನ ಬಂದರೆ ಹೆಚ್ಚು. ವಿವಿಧ ಪಕ್ಷಗಳ ಮುಖಂಡರುಗಳನ್ನು ಯಡಿಯೂರಪ್ಪ ಬಿಜೆಪಿಗೆ ಕರೆ ತಂದಿದ್ದರು. ಆದರೆ ಬಿಜೆಪಿಯ ಮತ್ತಷ್ಟು ನಾಯಕರು ಕಾಂಗ್ರೆಸ್ ಸೇರಲಿದ್ದಾರೆ.
ಬಿಜೆಪಿಗೆ ಭವಿಷ್ಯವಿಲ್ಲ ಅಂತಾ ನಾಯಕರಿಗೆ ಮನವರಿಕೆಯಾಗಿದೆ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಸ್ಪಷ್ಟ ಬಹುಮತ ಬರುತ್ತದೆ. ಕಾಂಗ್ರೆಸ್ 120ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ. ಬಿಜೆಪಿ ಕಚ್ಚಾಟದಿಂದ ಕಾಂಗ್ರೆಸ್ಗೆ 150 ಸ್ಥಾನ ಬಂದ್ರೂ ಆಶ್ಚರ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
