Saturday, April 18, 2026
Homeಚುನಾವಣೆ 2023ಚುನಾವಣಾ ರಾಜಕೀಯಕ್ಕೆ ಈಶ್ವರಪ್ಪ ಗುಡ್‌ ಬೈ!

ಚುನಾವಣಾ ರಾಜಕೀಯಕ್ಕೆ ಈಶ್ವರಪ್ಪ ಗುಡ್‌ ಬೈ!

ಶಿವಮೊಗ್ಗ: ಚುನಾವಣೆ ಸಮಯದಲ್ಲಿ ರಾಜಕೀಯ ಬದುಕಿಗೆ ವಿದಾಯ ಹೇಳುತ್ತಿರುವುದಾಗಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಘೋಷಿಸಿದ್ದಾರೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಅವರಿಗೆ ವೈಯಕ್ತಿಕವಾಗಿ ಪತ್ರ ಬರೆದಿರುವ ಕೆ.ಎಸ್. ಈಶ್ವರಪ್ಪ ರಾಜಕೀಯ ನಿವೃತ್ತಿ ಬಯಸಿದ್ದಾರೆ.

ಪತ್ರದಲ್ಲಿ, ನಾನು ಸ್ವಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿ. ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ-ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ನನ್ನ ಅನಂತ ಧನ್ಯವಾದಗಳು. ಎಂದು ಉಲ್ಲೇಖಿಸಲಾಗಿದೆ.

ತಮ್ಮ ವಿವಾದಾತ್ಮಕ ಹೇಳಿಕೆಗಳು ಹಾಗೂ ನಡವಳಿಕೆಗಳಿಂದ ಕೆ.ಎಸ್. ಈಶ್ವರಪ್ಪ ರಾಜ್ಯ ರಾಜಕಾರಣದಲ್ಲಿ ಪ್ರಸಿದ್ಧರಾಗಿದ್ದರು. ವರ್ಣರಂಜಿತ ರಾಜಕಾರಣಿಯಾಗಿದ್ದ ಈಶ್ವರಪ್ಪ, ಕಳೆದ ವರ್ಷ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಿಂದಾಗಿ ತಮ್ಮ ಸಚಿವ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಘೋಷಿಸಿರುವ ಈಶ್ವರಪ್ಪ, ರಾಜಕೀಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ ಬಗ್ಗೆ ಸುಳಿವು ನೀಡಿದ್ದಾರೆ. ತಮ್ಮ ಕುಟುಂಬದಲ್ಲಿ ಯಾರಿಗಾದರೂ ಟಿಕೆಟ್ ಕೇಳಬಹುದಾದ ಸಾಧ್ಯತೆಗಳೂ ಇವೆ. ಈ ಬಗ್ಗೆ ಇದುವರೆಗೂ ಈಶ್ವರಪ್ಪ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಹೆಚ್ಚಿನ ಸುದ್ದಿ