Monday, March 2, 2026
Homeಚುನಾವಣೆ 2023ಹುಬ್ಬಳ್ಳಿಯಲ್ಲಿ ಕುಮಾರಸ್ವಾಮಿ ಟೆಂಪಲ್ ರನ್

ಹುಬ್ಬಳ್ಳಿಯಲ್ಲಿ ಕುಮಾರಸ್ವಾಮಿ ಟೆಂಪಲ್ ರನ್

ಧಾರವಾಡ: ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಸ ಕೈಗೊಂಡಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ವಿವಿಧ ದೇವಾಲಯಗಳಿಗೆ ಭೇಟಿ ನೀಡಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಸ ಕೈಗೊಂಡಿರುವ ಕುಮಾರಸ್ವಾಮಿ ಅವರು ಇಂದು ಹುಬ್ಬಳ್ಳಿಯಲ್ಲಿ ಪಂಚರತ್ನ ಯಾತ್ರೆಯನ್ನೂ ನಡೆಸುತ್ತಿದ್ದಾರೆ. ಈ ವೇಳೆ ಹುಬ್ಬಳ್ಳಿಯ ಆರಾಧ್ಯ ದೈವ ಸಿದ್ಧಾರೂಢಸ್ವಾಮಿ ಮಠಕ್ಕೆ ಭೇಟಿ ನೀಡಿ, ಗದ್ದುಗೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಇಂಡಿಪಂಪ್ ನಲ್ಲಿರುವ ಸಯ್ಯದ್ ಫತೇಷಾ ವಲಿ ದರ್ಗಾ ಭೇಟಿಕೊಟ್ಟಿದಾರೆ.

ಬಳಿಕ ಕಾರ್ಯಕರ್ತರೊಂದಿಗೆ ದಾಜೀಬಾನಪೇಟೆಯ ತುಳಜಾಭವಾನಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ.

ದೇವಾಲಯಗಳ ಭೇಟಿಯ ನಂತರ ಗಣೇಶ ಪೇಟ್ ಸರ್ಕಲ್‌ನಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ. ಬಳಿಕ ಹಳಿಯಾಳದಲ್ಲಿಯೂ ಪಂಚರತ್ನ ಯಾತ್ರೆ ನಡೆಸಲಿದ್ದಾರೆ.

ಹೆಚ್ಚಿನ ಸುದ್ದಿ