ಬೆಂಗಳೂರು: ಅಪಾರ್ಟ್‌ಮೆಂಟ್ ಮೇಲಿಂದ ಕೆಳಗೆ ಜಿಗಿದು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. ಸೋನು ಪೂಜಾರಿ ಮೃತ ದುರ್ದೈವಿ. ಸೋನು ಪೂಜಾರಿಯ ಪತಿ ನಿರಂಜನ್ ಕಾರ್ಯನಿಮಿತ್ತ ಮುಂಬೈಗೆ ತೆರಳಿದ್ದರು. ಮನೆಯಲ್ಲಿ ಒಂಟಿಯಾಗಿದ್ದ ವೇಳೆ ಸೋನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಯಹತ್ಯೆಗೆ ಇದುವರೆಗೂ ಯಾವುದೇ ಕಾರಣ ತಿಳಿದು ಬಂದಿಲ್ಲ. ಮುಂಬೈನಲ್ಲಿರುವ ಪತಿ ನಿರಂಜನ್‌ಗೆ ಮಾಹಿತಿ ನೀಡಲಾಗಿದೆ. ಪುಟ್ಟೇನಹಳ್ಳಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.