ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು, ಇತ್ತೀಚೆಗೆ ಪಕ್ಷ ಸೇರಿರುವ ಇಬ್ಬರು ವಲಸಿಗ ನಾಯಕರಿಗೆ ಈ ಬಾರಿ ಟಿಕೆಟ್ ನೀಡಲಾಗಿದೆ.
ಅರಸೀಕೆರೆ ಕ್ಷೇತ್ರದಿಂದ ಶಿವಲಿಂಗೇ ಗೌಡರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಹಾಸನ ಜಿಲ್ಲೆಯ ಅರಸೀಕೆರೆ ಕ್ಷೇತ್ರದಲ್ಲಿ ಸತತ ಮೂರು ಬಾರಿ ಶಾಸಕರಾಗಿರುವ ಕೆ.ಎಂ.ಶಿವಲಿಂಗೇಗೌಡ ಅವರು ಇತ್ತೀಚೆಗಷ್ಟೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು.
ಇನ್ನು, ಬೆಳಗಾವಿಯ ಅಥಣಿ ಕ್ಷೇತ್ರದಿಂದ ಮಾಜಿ ಡಿಸಿಎಂ ಲಕ್ಷ್ಮಣ ಸವದಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ರಮೇಶ್ ಜಾರಕಿಹೊಳಿಯನ್ನು ಎದುರು ಹಾಕಿಕೊಂಡು ಬಿಜೆಪಿ ಟಿಕೆಟ್ ವಂಚಿತರಾದ ಸವದಿ, ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ.