ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಶುಕ್ರವಾರ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದೇ ಕಾಂಗ್ರೆಸ್ ಸೇರ್ಪಡೆಗೊಳ್ಳಲಿರುವ ಅವರು, ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ವಿವಿಧ ಹುದ್ದೆಗಳಿಗೆ ರಾಜೀನಾಮೆ ನೀಡುತ್ತಿರುವುದಾಗಿ ತಮ್ಮ ಒಂದು ಸಾಲಿನ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಅಥಣಿ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದ್ದ ಲಕ್ಷ್ಮಣ ಸವದಿಯವರಿಗೆ ಬಿಜೆಪಿ ಟಿಕೆಟ್ ನೀಡಿರಲಿಲ್ಲ. ಬದಲಿಗೆ ರಮೇಶ್ ಜಾರಕಿಹೊಳಿ ಆಪ್ತ ಕುಮಟಳ್ಳಿಯವರಿಗೆ ಟಿಕೆಟ್ ನೀಡಿತ್ತು. ಇದರಿಂದ ಅಸಮಾಧಾನಗೊಂಡಿದ್ದ ಲಕ್ಷ್ಮಣ ಸವದಿ ಗುರುವಾರ ಅಥಣಿಯಲ್ಲಿ ತಮ್ಮ ಕಾರ್ಯಕರ್ತರೊಡನೆ ಬೃಹತ್ ಸಮಾವೇಶ ನಡೆಸಿ ಕಾಂಗ್ರೆಸ್ ಸೇರ್ಪಡೆಯ ಮುನ್ಸೂಚನೆ ನೀಡಿದ್ದರು. ಇಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣ್ ದೀಪ್ ಸುರ್ಜೇವಾಲಾ ಹಾಗೂ ರಾಜ್ಯನಾಯಕರುಗಳಾದ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯರೊಂದಿಗೆ ಸುಧೀರ್ಘ ಚರ್ಚೆಯ ಬಳಿಕ ಕಾಂಗ್ರೆಸ್ ಸೇರುತ್ತಿರೋದಾಗಿ ಹಾಗೂ ಬಿಜೆಪಿಗೆ ರಾಜಿನಾಮೆ ನೀಡೋದಾಗಿ ಹೇಳಿದ್ದ ಸವದಿ ಸಭಾಪತಿಯವರನ್ನು ಭೇಟಿ ಮಾಡಿ ರಾಜಿನಾಮೆ ಸಲ್ಲಿಸಿದ್ರು