ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ಸ್ಫರ್ಧಾಳುಗಳಿಗೆ ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಹಲವು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ.
ಇಂದು ಅಮಾವಾಸ್ಯೆ ಎಂಬ ಕಾರಣಕ್ಕೆ ಸೋಮವಾರ ಹಾಗೂ ಮಂಗಳವಾರವೇ ಅತಿಹೆಚ್ಚು ನಾಮಪತ್ರಗಳು ಸಲ್ಲಿಕೆಯಾಗಿದೆ. ಆದರೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಯಮಕನಮರಡಿ ವಿಧಾನಸಭಾ ಕ್ಷೇತ್ರದಿಂದ ಇಂದು ಬೆಳಗ್ಗೆ 11ಗಂಟೆಗೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಅಮವಾಸ್ಯೆ ದಿನ ನಾಮಪತ್ರ ಸಲ್ಲಿಸುವ ನಿರ್ಧಾರ ಮಾಡಿದ್ದ ಅವ್ರು, ಕ್ಷೇತ್ರದ ಸ್ಮಶಾನದಿಂದಲೇ ಚುನಾವಣಾ ಪ್ರಚಾರ ಆರಂಭಿಸಿದ್ದರು. ಬಹುತೇಕ ಅಭ್ಯರ್ಥಿಗಳು ಈಗಾಗಲೇ ನಾಮಪತ್ರ ಸಲ್ಲಿಸಿದ್ದು, ಬುಧವಾರ ಸಂಜೆ ನಂತರ ಟಿಕೆಟ್ ಘೋಷಣೆಯಾದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ರಾಜ್ಯ ಸಾರ್ವತ್ರಿಕ ಚುನಾವಣೆ ಅಧಿಕಸೂಚನೆ ಪ್ರಕಟಗೊಂಡ ಏಪ್ರಿಲ್ 13 ರಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಯಿತು. ಅಂದು ಮೊದಲ ದಿನವೇ ಬರೋಬ್ಬರಿ 221 ನಾಮಪತ್ರಗಳು ಸಲ್ಲಿಕೆಯಾಗಿದ್ದವು.