ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಆರ್.ಶಂಕರ್ ತಮ್ಮ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.
ಇಂದು ಸಭಾಪತಿ ಬಸವರಾಜ್ ಹೊರಟ್ಟಿಯನ್ನು ಸಂಪರ್ಕಿಸಿ ರಾಜೀನಾಮೆ ನೀಡುವುದಾಗಿ ಆರ್.ಶಂಕರ್ ಮಾಹಿತಿ ನೀಡಿದ್ದಾರೆ.
ರಾಣೇಬೆನ್ನೂರು ಆರ್ ಶಂಕರ್ ಟಿಕೆಟ್ ನಿರೀಕ್ಷಿಸಿದ್ದರು.ಆದರೆ, ಶಾಸಕ ಅರುಣ್ ಕುಮಾರ್ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಇದರಿಂದ ಆರ್.ಶಂಕರ್ ಅಸಮಾಧಾನಗೊಂಡಿದ್ದಾರೆ.
ಬಿಜೆಪಿಯನ್ನು ಅಧಿಕಾರಕ್ಕೆ ತಂದೋರು ನಾವು, ನಮಗೆಲ್ಲ ಮೋಸ ಮಾಡಿದ್ರು ಎಂದು ಆರ್.ಶಂಕರ್ ಅಸಮಾಧಾನ ಹೊರ ಹಾಕಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಅವರು ಆರ್.ಶಂಕರ್ ಸರ್ಕಾರ ಉರುಳಲು ಪ್ರಮುಖ ಪಾತ್ರ ವಹಿಸಿದ್ದರು.
