ಹೊಸಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎಂಟಿಬಿ ನಾಗರಾಜ್ ನಾಮಪತ್ರ ಸಲ್ಲಿಕೆ ಮಾಡಿದ್ದು, 1510 ಕೋಟಿ ರೂ ಆಸ್ತಿ ಘೋಷಣೆ ಮಾಡಿದ್ದಾರೆ.
ಹೊಸಕೋಟೆ ನಗರದಲ್ಲಿ ಸಾವಿರಾರು ಕಾರ್ಯಕರ್ತರ ಜೊತೆ ರ್ಯಾಲಿ ನಡೆಸಿದ ಎಂಟಿಬಿ ನಾಗರಾಜ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಎಂಟಿಬಿ ನಾಗರಾಜ್ ಈ ಬಾರಿ 1510 ಕೋಟಿ ರೂ ಆಸ್ತಿ ಘೋಷಣೆ ಮಾಡಿದ್ದಾರೆ.
ಕಳೆದ ಬಾರಿಯ ಚುನಾವಣೆಯ ವೇಳೆ 1015 ಕೋಟಿ ರೂ ಆಸ್ತಿ ಘೋಷಣೆ ಮಾಡಿದ್ದರು. ನಾಲ್ಕು ವರ್ಷದಲ್ಲಿ 495 ಕೋಟಿ ರೂ ಆಸ್ತಿ ಹೆಚ್ಚಳವಾಗಿದೆ.
ಇನ್ನು, ಈ ಬಾರಿಯ ಚುನಾವಣೆಯಲ್ಲಿ ಎಂಟಿಬಿ ನಾಗರಾಜ್ ಅವರು ತಮ್ಮ ಪುತ್ರನಿಗೆ ಟಿಕೆಟ್ ನೀಡುವಂತೆ ಹೈಕಮಾಂಡ್ಗೆ ಮನವಿ ಮಾಡಿದ್ದರು. ಆದರೆ ಬಿಜೆಪಿ ನಾಯಕರು ಮಗನಿಗೆ ಟಿಕೆಟ್ ನೀಡಲು ನಿರಾಕರಿಸಿ ಎಂಟಿಬಿ ಅವರಿಗೆ ಟಿಕೆಟ್ ನೀಡಿದ್ದರು. ಇದರೊಂದಿಗೆ ಎಂಟಿಬಿ ಅವರೇ ಚುನಾವಣಾ ಅಖಾಡಕ್ಕೆ ಭರ್ಜರಿಯಾಗಿ ಎಂಟ್ರಿ ಕೊಟ್ಟಿದ್ದಾರೆ.

