ಹೈದರಾಬಾದ್ ನ ಉಪ್ಪಲ್ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಐಪಿಎಲ್ ಪಂದ್ಯ ನಡೆಯುತ್ತಿದೆ.ಪಂದ್ಯದ ನಡುವೆ ಮದ್ಯದ ಅಮಲಿನಲ್ಲಿ ಎರಡೂ ತಂಡಗಳ ಅಭಿಮಾನಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ಅಪಾರ ಸಂಖ್ಯೆಯಲ್ಲಿ ಕ್ರಿಕೆಟ್ ಅಭಿಮಾನಿಗಳು ಸ್ಟೇಡಿಯಂಗೆ ಆಗಮಿಸಿದ್ದಾರೆ. ಇದರ ನಡುವೆಯೇ ಮದ್ಯದ ಅಮಲಿನಲ್ಲಿದ್ದ ಉಭಯ ತಂಡಗಳ ಅಭಿಮಾನಿಗಳ ನಡುವೆ ಕಿರಿಕ್ ಶುರುವಾಗಿದೆ. ತಕ್ಷಣ ಎಚ್ಚೆತ್ತ ಪೊಲೀಸರು ಅವರನ್ನು ಕ್ರೀಡಾಂಗಣದಿಂದ ಹೊರಗೆ ಕಳುಹಿಸಿದರು. ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.