Friday, June 19, 2026
Homeಚುನಾವಣೆ 2023ಮುರುಗೇಶ್ ನಿರಾಣಿ ಸಾಂಕೇತಿಕ ನಾಮಪತ್ರ ಸಲ್ಲಿಕೆ

ಮುರುಗೇಶ್ ನಿರಾಣಿ ಸಾಂಕೇತಿಕ ನಾಮಪತ್ರ ಸಲ್ಲಿಕೆ

ಬಾಗಲಕೋಟೆ: ಬಿಜೆಪಿ ಶಾಸಕ ಮುರುಗೇಶ್ ನಿರಾಣಿ ಗುರುವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಬೀಳಗಿಯ ಸುಪ್ರಸಿದ್ಧ ಸಿದ್ದೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ನಂತರ ನಾಮಪತ್ರ ಸಲ್ಲಿಸಿದರು. ಮುರುಗೇಶ್ ನಿರಾಣಿ ಇದೇ ಏ. 17 ರಂದು ಬೆಂಬಲಿಗರ ಮೆರವಣಿಗೆಯೊಂದಿಗೆ ಮತ್ತೊಮ್ಮೆ ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ.
ಬೀಳಗಿಯ ಹಾಲಿ ಶಾಸಕರಾಗಿರುವ ಮುರುಗೇಶ್ ನಿರಾಣಿಯವರಿಗೆ ಸಂಸದ ಪಿ.ಸಿ.ಗದ್ದಿಗೌಡರ್ ಸಾಥ್ ನೀಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಹಣಮಂತ ನಿರಾಣಿ ಹಾಗೂ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

ಹೆಚ್ಚಿನ ಸುದ್ದಿ