Sunday, May 3, 2026
Homeಟಾಪ್ ನ್ಯೂಸ್ಆನ್‌ಲೈನ್‌ನಲ್ಲೂ ನಂದಿನಿ ಉತ್ಪನ್ನ ಮಾರಾಟ

ಆನ್‌ಲೈನ್‌ನಲ್ಲೂ ನಂದಿನಿ ಉತ್ಪನ್ನ ಮಾರಾಟ

ಬೆಂಗಳೂರು: ಕೆಎಂಎಫ್, ಅಮುಲ್ ನಡುವಿನ ಜಟಾಪಟಿ ಮುಗಿಯುತ್ತಲೇ ಇಲ್ಲ. ವಿರೋಧದ ಮಧ್ಯೆಯೂ ಆನ್‌ಲೈನ್‌ನಲ್ಲಿ ಉತ್ಪನ್ನಗಳ ಮಾರಾಟಕ್ಕೆ ಮುಂದಾದ ಅಮುಲ್‌ಗೆ ಈಗ ಕೆಎಂಫ್ ದೊಡ್ಡ ಶಾಕ್ ನೀಡಿದೆ.

ಆನ್‌ಲೈನ್‌ನಲ್ಲಿ ನಂದಿನಿ ಉತ್ಪನ್ನಗಳ ಮಾರಾಟ ಹೆಚ್ಚಿಸಿದೆ. ಸದ್ಯಕ್ಕೆ ಸರಿಸುಮಾರು 2 ಲಕ್ಷ ಲೀಟರ್ ನಂದಿನಿ ಹಾಲು ಆನ್‌ಲೈನ್ ಮೂಲಕ ಮಾರಾಟವಾಗುತ್ತಿದೆ. ಇದರ ಪ್ರಮಾಣ ಇನ್ನಷ್ಟು ಹೆಚ್ಚಿಸುವ ಗುರಿಯನ್ನು ಕೆಎಂಎಫ್ ಹೊಂದಿದೆ. ಅಪಾರ್ಟ್ಮೆಂಟ್‌ಗಳು ಹಾಗೂ ಹೊರರಾಜ್ಯದವರನ್ನೇ ಕೆಎಂಎಫ್ ಗುರಿಯಾಗಿಸಿಕೊಂಡಿದೆ ಎನ್ನಲಾಗಿದೆ. 

ಅಮುಲ್ ಕುಟುಂಬ ಬೆಂಗಳೂರು ನಗರಕ್ಕೆ ಹಾಲು ಮತ್ತು ಮೊಸರಿನ ರೂಪದಲ್ಲಿ ಹೊಸ ತಾಜಾತನವನ್ನು ತರುತ್ತಿದೆ. ಕ್ವಿಕ್ ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಲ್ಲಿ ಶೀಘ್ರದಲ್ಲೇ ಲಭ್ಯವಾಗಲಿದ್ದು, ಅವುಗಳನ್ನು ನಿಮ್ಮ ಮನೆ ಬಾಗಿಲಿಗೆ ಆರ್ಡರ್ ಮಾಡಬಹುದು ಎಂದು ಅಮುಲ್ ಕನ್ನಡ ಏಪ್ರಿಲ್ 5 ರಂದು ಟ್ವೀಟ್ ಮಾಡಿತ್ತು. ಈ ಟ್ವೀಟ್ ಮಾಡಿದ ಬೆನ್ನಲ್ಲೇ ಕನ್ನಡಿಗರು, ರಾಜಕೀಯ ನಾಯಕರು ಅಮುಲ್ ವಿರುದ್ಧ ಟೀಕೆ ಮಾಡಲು ಆರಂಭಿಸಿದ್ದಾರೆ. 

ನಂದಿನಿ ಕೇವಲ ಕರ್ನಾಟಕದಲ್ಲಿ ಮಾತ್ರ ಹಾಲನ್ನು ಮಾರಾಟ ಮಾಡುತ್ತಿಲ್ಲ. ಉಳಿದ ರಾಜ್ಯಗಳಲ್ಲೂ ಹಾಲನ್ನು ಮಾರಾಟ ಮಾಡುತ್ತಿದೆ. ಹೀಗಿರುವಾಗ ಅಮುಲ್ ಬೇಡ ಎಂದು ಹೇಳಲು ಒಕ್ಕೂಟ ವ್ಯವಸ್ಥೆಯಲ್ಲಿ ಯಾವ ಅಧಿಕಾರವಿದೆ. ಯಾವುದು ಬೇಕೋ ಅದನ್ನು ಗ್ರಾಹಕರು ಖರೀದಿಸುತ್ತಾರೆ ಎಂಬುದು ಅಮುಲ್ ವಾದ್ವಾಗಿದೆ.

ಹೆಚ್ಚಿನ ಸುದ್ದಿ