Monday, July 7, 2025
Homeಚುನಾವಣೆ 2023ರಾಜ್ಯಕ್ಕೆ ಮತ್ತೆ ಬರಲಿದ್ದಾರೆ ಮೋದಿ-ಶಾ

ರಾಜ್ಯಕ್ಕೆ ಮತ್ತೆ ಬರಲಿದ್ದಾರೆ ಮೋದಿ-ಶಾ

ಬೆಂಗಳೂರು: ರಾಜ್ಯ ಅಸೆಂಬ್ಲಿ ಚುನಾವಣಾ ಭಾಗವಾಗಿ ಕೇಂದ್ರ ಗೃಹಸಚಿವ ಅಮಿತ್‌ ಶಾ ಹಾಗೂ ಪ್ರಧಾನಿ ಮೋದಿ ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ.

ನಾಳೆ ಮಧ್ಯಾಹ್ನ ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಭೇಟಿ ನೀಡಲಿದ್ದಾರೆ. ನಾಳೆ ಸಂಜೆ ಅಥವಾ ರಾತ್ರಿ ವೇಳೆ ಅಮಿತ್ ಷಾ ನೇತೃತ್ವದಲ್ಲಿ ಬಿಜೆಪಿಯ ಮಹತ್ವದ ಸಭೆ ನಡೆಯುವ ಸಾಧ್ಯತೆ ಇದೆ.

ಅದೇ ರೀತಿ, ಏಪ್ರಿಲ್ 29ರಿಂದ ರಾಜ್ಯದಲ್ಲಿ ಪ್ರಧಾನಿ ಮೋದಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ರಾಜ್ಯದಲ್ಲಿ ಒಟ್ಟು 180 ಕ್ಷೇತ್ರಗಳ ವ್ಯಾಪ್ತಿಯಲ್ಲಿ ಪ್ರಧಾನಿ ಮOದಿಪ್ರಚಾರ ನಡೆಸಲಿದ್ದಾರೆ.

ಮೋದಿ ಆಗಮನದ ಹಿನ್ನೆಲೆಯಲ್ಲಿ ರೋಡ್​ ಶೋ, ರ್ಯಾಲಿ, ಸಾರ್ವಜನಿಕ ಸಭೆ ಆಯೋಜಿಸಲು ರೂಪರೇಷೆ ಸಿದ್ಧಗೊಳ್ಳುತ್ತಿದ್ದು, ಏ.29ರಂದು ಬೀದರ್, ದಾವಣಗೆರೆ, ಚಿತ್ರದುರ್ಗ, ಬೆಂಗಳೂರಲ್ಲಿ ಪ್ರವಾಸ ಹಮ್ಮಿಕೊಳ್ಳಲಾಗಿದೆ.

ಹೆಚ್ಚಿನ ಸುದ್ದಿ