ನವದೆಹಲಿ: ಭಾರತದಲ್ಲಿ ಮುಸ್ಲಿಮರ ಸ್ಥಿತಿಗತಿಯನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಮುಸ್ಲಿಮರ ಪರಿಸ್ಥಿತಿ ಕಠಿಣವಾಗಿದ್ದರೆ ಅವರ ಜನಸಂಖ್ಯೆ ಹೆಚ್ಚುತ್ತಿರಲಿಲ್ಲ ಎಂದಿದ್ದಾರೆ.
‘ಮುಸ್ಲಿಮರ ಮೇಲಿನ ಹಿಂಸಾಚಾರ’ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಭಾರತವು ವಿಶ್ವದ ಎರಡನೇ ಅತಿದೊಡ್ಡ ಮುಸ್ಲಿಂ ಜನಸಂಖ್ಯೆಯನ್ನು ಹೊಂದಿದೆ ಮತ್ತು ದೇಶದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚುತ್ತಿದೆ.
ನಿಜವಾಗಿಯೂ ಭಾರತದಲ್ಲಿ ಅವರ ಪರಿಸ್ಥಿತಿ ಕಷ್ಟವಾಗಿದ್ದರೆ 1947ರಿಂದ ಪಾಕಿಸ್ತಾನಕ್ಕೆ ಹೋಲಿಸಿದಾಗ ಅವರ ಜನಸಂಖ್ಯೆ ಹೆಚ್ಚಾಗುತ್ತಿತ್ತೇ ಎಂದು ಪ್ರಶ್ನಿಸಿದ್ದಾರೆ.
ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಸಂಖ್ಯೆ ಕ್ಷೀಣಿಸುತ್ತಿದೆ. ಅಲ್ಲಿ ಕೆಲವು ಮುಸ್ಲಿಂ ಪಂಗಡಗಳ ಜನರ ಸಂಖ್ಯೆಯೂ ಕಡಿಮೆಯಾಗುತ್ತಿದೆ. ಆದರೆ ಭಾರತದಲ್ಲಿ ಪ್ರತಿಯೊಬ್ಬ ಮುಸಲ್ಮಾನರೂ ವ್ಯಾಪಾರ ಮಾಡುತ್ತಿದ್ದಾರೆ. ಅವರ ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತಿದೆ, ಫೆಲೋಶಿಪ್ ನೀಡಲಾಗುತ್ತಿದೆ ಎಂದರು.