ಕೊಲ್ಕತ್ತಾ: ಲೋಕಸಭಾ ಚುನಾವಣೆಯಲ್ಲಿ 34 ಸೀಟುಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಿ. ಆನಂತರ ಪಶ್ಚಿಮ ಬಂಗಾಳದಲ್ಲಿ ರಾಮನವಮಿಯ ಸಂದರ್ಭ ದಾಳಿ ನಡೆಯದಂತೆ ನಾವು ನೋಡಿಕೊಳ್ಳುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಬಿರ್ಬಹುಮ್ ನಲ್ಲಿ ಸಾರ್ವಜನಿಕ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ರಾಮ ನವಮಿ ಮೆರವಣಿಗೆ ಮಾಡಲು ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿದರು.
ದೀದಿಯ ಓಲೈಕೆ ರಾಜಕಾರಣದಿಂದ ಇಂತಹ ಘಟನೆಗಳು ನಡೆಯುತ್ತದೆ. ಒಮ್ಮೆ ಬಿಜೆಪಿಗೆ ಅಧಿಕಾರ ಸಿಕ್ಕರೆ ಸಾಕು, ಮುಂದೆಂದು ಇಂತಹ ಘಟನೆಗಳು ನಡೆಯುವುದಿಲ್ಲ ಎಂದು ಅವರು ಹೇಳಿದರು.
ಆದರೆ ವಿಪರ್ಯಾಸವೆಂದರೆ ರಾಮನವಮಿ ಮೆರವಣಿಗೆಯ ಸಂದರ್ಭ ಗಲಭೆ ನಡೆಸಲು ವಾಟ್ಸಾಪ್ ಮೂಲಕ ಸಂಚು ರೂಪಿಸಿದ್ದ ಆರೋಪದಲ್ಲಿ ಬಜರಂಗದಳ ಕಾರ್ಯಕರ್ತರನ್ನು ಬಿಹಾರದಲ್ಲಿ ಇತ್ತೀಚೆಗೆ ಬಂಧಿಸಲಾಗಿತ್ತು