Monday, July 7, 2025
Homeಚುನಾವಣೆ 2023ಭವಾನಿಗೆ ಟಿಕೆಟ್‌ ಸಿಗದಿರುವುದಕ್ಕೆ ಬೇಸರವಿಲ್ಲ: ಹೆಚ್‌ ಡಿ ರೇವಣ್ಣ

ಭವಾನಿಗೆ ಟಿಕೆಟ್‌ ಸಿಗದಿರುವುದಕ್ಕೆ ಬೇಸರವಿಲ್ಲ: ಹೆಚ್‌ ಡಿ ರೇವಣ್ಣ

ಕುಮಾರಸ್ವಾಮಿ vs ರೇವಣ್ಣ ಪ್ರತಿಷ್ಠೆ ಮೇಲಾಟಕ್ಕೆ ಕಾರಣವಾಗಿರುವ ಹಾಸನ ಕ್ಷೇತ್ರಕ್ಕೆ ಕೊನೆಗೂ ಟಿಕೆ ಘೋಷಣೆಯಾಗಿದೆ. ರೇವಣ್ಣ ಅವರ ಬೇಡಿಕೆಗೆ ವಿರುದ್ಧವಾಗಿ  ಹೆಚ್.ಪಿ.ಸ್ವರೂಪ್​ಗೆ ಹಾಸನ ಕ್ಷೇತ್ರದ ಜೆಡಿಎಸ್​ ಟಿಕೆಟ್​ ಘೋಷಣೆ ಮಾಡಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಹೆಚ್‌ ಡಿ ರೇವಣ್ಣ, “ಹಾಸನ ಟಿಕೆಟ್‌ ವಿಚಾರದಲ್ಲಿ ನನಗೆ ಯಾವುದೇ ಬೇಸರವಿಲ್ಲ. ನಮಗೆ ಹೆಚ್‌.ಡಿ.ದೇವೇಗೌಡರ ಆರೋಗ್ಯ ಮುಖ್ಯ. ಹೆಚ್‌.ಡಿ.ದೇವೇಗೌಡರು ಹೇಳಿದಂತೆ ನಾವು ಕೇಳುತ್ತೇವೆ. ಹೆಚ್‌ಡಿಡಿ ಹೇಳಿದ್ರೆ ಹಾಸನ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತೇವೆ” ಎಂದು ಹೇಳಿದ್ದಾರೆ.

ಅದಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ರೇವಣ್ಣ, “ಹಾಸನ ಕ್ಷೇತ್ರದ ಟಿಕೆಟ್​ ಬಗ್ಗೆ ದೇವೇಗೌಡರಿಂದಲೇ ತೀರ್ಮಾನ ಮಾಡಲಾಗಿದೆ. ಹಾಸನ ಕ್ಷೇತ್ರದಲ್ಲಿ ಭವಾನಿ ಕಣಕ್ಕಿಳಿಸಬೇಕೆಂದು ಹೇಳುತ್ತಿದ್ದೆ. ಕಳೆದ 2 ವರ್ಷಗಳಿಂದ ಭವಾನಿ ನಿಲ್ಲಿಸಬೇಕೆಂದು ಚರ್ಚೆ ನಡೆಯುತ್ತಿತ್ತು. ಪ್ರೀತಂಗೌಡ 50,000 ಮತಗಳ ಅಂತರದಿಂದ ಗೆಲ್ಲುವೆ ಅಂದಿದ್ದ. ಅದನ್ನು ಸವಾಲಾಗಿ ಸ್ವೀಕರಿಸಿ ಭವಾನಿಯನ್ನು ಕಣಕ್ಕಿಳಿಸಲು ನಿರ್ಧರಿಸಿದ್ದೆವು” ಎಂದು ಹೇಳಿದ್ದಾರೆ.

ಹೆಚ್ಚಿನ ಸುದ್ದಿ