ಹಾವೇರಿ: ಹಾವೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿರುವ ಬಿಜೆಪಿ ಶಾಸಕ ನೆಹರು ಓಲೇಕಾರ್ ಇಂದು ಬಿಜೆಪಿ ತೊರೆದು ಜೆಡಿಎಸ್ ಸೇರಲು ನಿರ್ಧರಿಸಿದ್ದಾರೆ.
ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ನೆಹರು ಓಲೇಕಾರ್ ಹೇಳಿದ್ದಾರೆ. ಇಂದು ಶಿರಸಿಗೆ ತೆರಳಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸುವೆ. ನಂತರ ಬೆಂಗಳೂರಿನಲ್ಲಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಜೆಡಿಎಸ್ ಸೇರುವುದಾಗಿ ನೆಹರು ಓಲೇಕಾರ್ ತಿಳಿಸಿದ್ದಾರೆ.
ಅಲ್ಲದೆ, ತಮ್ಮೊಂದಿಗೆ ಸಾವಿರಾರು ಬಿಜೆಪಿ ಕಾರ್ಯಕರ್ತರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದಾರೆ ಎಂದು ಓಲೇಕಾರ ಹೇಳಿದ್ದಾರೆ. ಹಾವೇರಿ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಲ್ಲಿ ನೆಹರು ಓಲೇಕಾರ್ ಬದಲಿಗೆ ಗವಿಸಿದ್ದಪ್ಪ ದ್ಯಾಮಣ್ಣನವರ್ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.