ಶಿರಸಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ. ಶಿರಸಿಯ ವಿಶ್ವೇಶ್ವರ ಹೆಗಡೆ ಕಾಗೇರಿ ನಿವಾಸ್ಕೆ ತೆರಳಿ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ. ಇಂದೇ ತಮ್ಮ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜಿನಾಮೆ ಸಲ್ಲಿಸಿದ ಶೆಟ್ಟರ್ ಕಳೆದ 40 ವರ್ಷಗಳ ಬಿಜೆಪಿಯೊಂದಿಗಿನ ಸಂಬಂಧವನ್ನು ಕಡಿದುಕೊಂಡಿದ್ದಾರೆ.
ರಾಜಿನಾಮೆ ನಂತರ ಕೋಲಾರಕ್ಕೆ ತೆರಳಿ ಕಾಂಗ್ರೆಸ್ ಸೇರ್ಪಡೆಗೊಳ್ಳೋದಾಗಿ ಹೇಳಿದ ಜಗದೀಶ್ ಶೆಟ್ಟರ್, ಬಿಜೆಪಿ ಹಾಗೂ ನನ್ನ ಸಂಬಂಧ ಮುಗಿದ ಅಧ್ಯಾಯ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಸಮ್ಮುಖದಲ್ಲೇ ಜಗದೀಶ್ ಶೆಟ್ಟರ್‌ರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಕಾಂಗ್ರೆಸ್ ಸಜ್ಜಾಗಿದೆ ಎಂದು ಹೇಳಲಾಗಿದೆ.
