Tuesday, April 14, 2026
Homeದೇಶ2014ರ ನಂತರ ಮೊತ್ತಮೊದಲ ಬಾರಿಗೆ ಪಾಕಿಸ್ತಾನ ವಿದೇಶಾಂಗ ಸಚಿವರು ಭಾರತಕ್ಕೆ!

2014ರ ನಂತರ ಮೊತ್ತಮೊದಲ ಬಾರಿಗೆ ಪಾಕಿಸ್ತಾನ ವಿದೇಶಾಂಗ ಸಚಿವರು ಭಾರತಕ್ಕೆ!

ಹೊಸದಿಲ್ಲಿ: ಗೋವಾದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆಯ ವಿದೇಶಾಂಗ ಸಚಿವರ ಸಭೆಯಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಮುಂದಿನ ತಿಂಗಳು ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಾಕಿಸ್ತಾನ ಗುರುವಾರ ಪ್ರಕಟಿಸಿದೆ.

“ಬಿಲಾವಲ್ ಭುಟ್ಟೋ ಜರ್ದಾರಿ ಅವರು ಮೇ 4-5ರಂದು ಭಾರತದ ಗೋವಾದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆಯ ವಿದೇಶಾಂಗ ಸಚಿವರ ಸಭೆಯಲ್ಲಿ ಪಾಕಿಸ್ತಾನದ ನಿಯೋಗದ ನಾಯಕತ್ವ ವಹಿಸಲಿದ್ದಾರೆ ಎಂದು ವಿದೇಶಾಂಗ ಕಚೇರಿಯ ವಕ್ತಾರ ಮುಮ್ತಾಜ್ ಜಹ್ರಾ ಬಲೋಚ್ ತಿಳಿಸಿದ್ದಾರೆ.

2014ರಲ್ಲಿ ಆಗಿನ ಪಾಕ್ ಪ್ರಧಾನಿ ನವಾಝ್ ಶರೀಫ್ ನಂತರ ಯಾವುದೇ ಪಾಕಿಸ್ತಾನಿ ನಾಯಕರು ಭಾರತಕ್ಕೆ ಭೇಟಿ ನೀಡಿರಲಿಲ್ಲ.

ಹೆಚ್ಚಿನ ಸುದ್ದಿ