ನವದೆಹಲಿ: ಡಾಕ್ಯುಮೆಂಟರಿ ವಿಭಾಗದಲ್ಲಿ ಆಸ್ಕರ್ ಗೆದ್ದ `ದಿ ಎಲಿಫೆಂಟ್ ವಿಸ್ಪರರ್ಸ್’ ತಂಡದ ಸದಸ್ಯರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ.
ದಿ ಎಲಿಫೆಂಟ್ ವಿಸ್ಪರರ್ಸ್ ನಿರ್ದೇಶಕಿ ಕಾರ್ತಿಕಿ ಗೊನ್ಸಾಲ್ವೆಸ್, ನಿರ್ಮಾಪಕಿ ಗುನೀತ್ ಮೊಂಗಾ ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದು, ಪ್ರಧಾನಿ ತಂಡವನ್ನು ಪ್ರಶಂಸಿಸಿದ್ದಾರೆ.
ಭೇಟಿಯ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪ್ರಧಾನಿ ಮೋದಿ, ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಿನಿಮಾ ಜಾಗತಿಕ ಮಟ್ಟದಲ್ಲಿ ಜನರ ಮೆಚ್ಚುಗೆ ಪಡೆದಿದೆ. ಡಾಕ್ಯುಮೆಂಟರಿ ನಿರ್ಮಾಣ ಮಾಡಿದ ಅದ್ಭುತ ತಂಡವನ್ನು ಭೇಟಿ ಮಾಡುವ ಅವಕಾಶ ನನಗೆ ಸಿಕ್ಕಿತು. ಈ ತಂಡ ಭಾರತವನ್ನು ಹೆಮ್ಮೆಪಡುವಂತೆ ಮಾಡಿದೆ ಎಂದಿದ್ದಾರೆ.
ಅನಾಥ ಆನೆಮರಿಗಳನ್ನು ಆರೈಕೆ ಮಾಡಿ ಸಾಕುವ ಸಾಕುವ ಬೆಳ್ಳಿ ಹಾಗೂ ಬೊಮ್ಮಣ್ಣ ಎಂಬ ದಂಪತಿಯ ಜೀವನವನ್ನು ಆಧರಿಸಿ ಚಿತ್ರಿಸಲಾಗಿರುವ ಡಾಕ್ಯುಮೆಂಟರಿ ‘ದಿ ಎಲಿಫೆಂಟ್ ವಿಸ್ಪರರ್ಸ್’ ಆಸ್ಕರ್ ಗೆದ್ದು ಜನಮನವನ್ನೂ ಗೆದ್ದಿದೆ.
