Monday, March 2, 2026
Homeಚುನಾವಣೆ 2023ಈಶ್ವರಪ್ಪ ಮನೆ ಮುಂದೆ ಪ್ರತಿಭಟನೆ- ಶೆಟ್ಟರ್ ಮನೆಯಲ್ಲಿ ಮೀಟಿಂಗ್

ಈಶ್ವರಪ್ಪ ಮನೆ ಮುಂದೆ ಪ್ರತಿಭಟನೆ- ಶೆಟ್ಟರ್ ಮನೆಯಲ್ಲಿ ಮೀಟಿಂಗ್

ಶಿವಮೊಗ್ಗ-ಹುಬ್ಬಳ್ಳಿ: ತಮ್ಮ ರಾಜಕೀಯ ನಿವೃತ್ತಿ ಘೋಷಿಸುತ್ತಿದ್ದಂತೆಯೇ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಮನೆಯ ಮುಂದೆ ಅಭಿಮಾನಿಗಳ ಪ್ರತಿಭಟನೆ ಶುರುವಾಗಿದೆ. ತಮ್ಮ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕು. ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲೇ ಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಹಲವು ಈಶ್ವರಪ್ಪ ಅಭಿಮಾನಿಗಳು ಕಣ್ಣೀರು ಹಾಕಿದರೆ, ಮತ್ತೆ ಕೆಲವರು ಬೇಕೇ ಬೇಕು ಈಶ್ವರಪ್ಪ ಬೇಕು ಎಂದು ಘೋಷಣೆಗಳನ್ನು ಕೂಗಿದ್ದಾರೆ. ಈಶ್ವರಪ್ಪ ಪುತ್ರ ಕಾಂತೇಶ್ ಅಭಿಮಾನಿಗಳನ್ನು ಸಮಾಧಾನಪಡಿಸಿದರು.

ಇದೇ ವೇಳೆ ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಬಿಜೆಪಿ ಟಿಕೆಟ್ ನಿರಾಕರಿಸಿರುವ ಹಿನ್ನೆಲೆಯಲ್ಲಿ ಶೆಟ್ಟರ್ ಅವರ ನಿವಾಸದ ಬಳಿ ಹಿಂಬಾಲಕರು ಸಭೆ ನಡೆಸಿದ್ದಾರೆ. ಬಿಜೆಪಿ ಟಿಕೆಟ್ ನೀಡಲಿ ಬಿಡಲಿ ತಾನು ಚುನಾವಣೆಯಲ್ಲಿ ಸ್ಪರ್ಧಿಸುವುದಂತೂ ಖಚಿತ ಎಂದು ಜಗದೀಶ್ ಶೆಟ್ಟರ್ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಅವರ ಮುಂದಿನ ರಾಜಕೀಯ ನಿರ್ಧಾರದ ಕುರಿತು ಸಭೆ ನಡೆಸಲಾಗುತ್ತಿದೆ. ಜಗದೀಶ್ ಶೆಟ್ಟರ್ ಅವರ ಆಪ್ತರು, ಅಭಿಮಾನಿಗಳು ಹಾಗೂ ಕೆಲವು ಬಿಜೆಪಿ ಮುಖಂಡರೂ ಸಹ ಸಭೆಯಲ್ಲಿ ಭಾಗವಹಿಸಿದ್ದಾರೆ.

ಜಗದೀಶ್ ಶೆಟ್ಟರ್ ಬೆಂಬಲಿಗರೊಂದಿಗೆ ಮೀಟಿಂಗ್
ಕೆ.ಎಸ್. ಈಶ್ವರಪ್ಪನವರ ರಾಜಕೀಯ ನಿವೃತ್ತಿ ನಿರ್ಧಾರವನ್ನು ಹಿಂಪಡೆಯುವಂತೆ ಒತ್ತಾಯಿಸಿ ಅವರ ಅಭಿಮಾನಿಗಳು ಪ್ರತಿಭಟನೆ ನಡೆಸಿದರು

ಹೆಚ್ಚಿನ ಸುದ್ದಿ