Tuesday, April 14, 2026
Homeಚುನಾವಣೆ 2023ಕರ್ನಾಟಕದಲ್ಲಿ ಐಟಿ, ಇಡಿ ದಾಳಿಗೆ ಸಿದ್ದತೆ: ಕಾಂಗ್ರೆಸ್ ಗಂಭೀರ ಆರೋಪ

ಕರ್ನಾಟಕದಲ್ಲಿ ಐಟಿ, ಇಡಿ ದಾಳಿಗೆ ಸಿದ್ದತೆ: ಕಾಂಗ್ರೆಸ್ ಗಂಭೀರ ಆರೋಪ

ನವದೆಹಲಿ: ಐಟಿ, ಇಡಿ ಹಾಗೂ ಸಿಬಿಐ ಸಂಸ್ಥೆಗಳನ್ನು ಬಳಸಿ ರಾಜ್ಯದ ಕಾಂಗ್ರೆಸ್‌ ನಾಯಕರನ್ನು ಬೆದರಿಸಲು ಬಿಜೆಪಿ ಷಡ್ಯಂತ್ರ ನಡೆಸಿದೆ ಎಂದು ಕಾಂಗ್ರೆಸ್ ಗಂಭೀರ ಸ್ವರೂಪದ ಆರೋಪ ಮಾಡಿದೆ. 

ದೆಹಲಿಯಲ್ಲಿ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಣದೀಪ್ ಸಿಂಗ್ ಸುರ್ಜೆವಾಲಾ ಕರ್ನಾಟಕದಲ್ಲಿ ಬಿಜೆಪಿಯ ಡಬಲ್‌ ಇಂಜಿನ್‌ ಸರ್ಕಾರ ಫೇಲ್ ಆಗಿದೆ. 40% ಕಮಿಷನ್‌ ಪಡೆದು ಈಗಾಗಲೇ ಜನರ ಕೆಂಗಣ್ಣಿಗೆ ಗುರಿಯಾಗಿದೆ. 

“ಬಿಜೆಪಿಗೆ ಕರ್ನಾಟಕದಲ್ಲಿ ಸೋಲಿನ ಭೀತಿ ಆರಂಭವಾಗಿದೆ. ಎಲ್ಲಾ ಸಮೀಕ್ಷೆಗಳು ಕಾಂಗ್ರೆಸ್‌ ಪಕ್ಷ ಬಹುಮತ ಪಡೆಯಲಿದೆ ಎಂದು ಹೇಳುತ್ತಿವೆ.  ಬಿಜೆಪಿ ಹೈಕಮಾಂಡ್‌ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲ್ಲ ಎಂದು ಅಧಿಕಾರದ ದುರುಪಯೋಗ ಮಾಡುತ್ತಿದ್ದಾರೆ” ಎಂದ್ರು  

ರಾಜ್ಯದಲ್ಲಿ ಬಿಜೆಪಿಗೆ ಜನಬೆಂಬಲವಿಲ್ಲ.. ಹೀಗಾಗಿ ಐ.ಟಿ, ಇ.ಡಿ ಹಾಗೂ ಸಿಬಿಐ ಸಂಸ್ಥೆಗಳ ಸಾವಿರಕ್ಕೂ ಅಧಿಕಾರಿಗಳನ್ನು ರಾಜ್ಯಕ್ಕೆ ಕಳುಹಿಸಿದ್ದಾರೆ. ಅವರ ಮೂಲಕ ಕಾಂಗ್ರೆಸ್‌ ನ ಅಭ್ಯರ್ಥಿಗಳು, ಕಾಂಗ್ರೆಸ್‌ ಪರವಾಗಿ ಕೆಲಸ ಮಾಡುವವರ ಮೇಲೆ ದಾಳಿ ಮಾಡಲು ಯೋಜಿಸಲಾಗಿದೆ. ಈಗಾಗಲೇ ನಮ್ಮ ಹಿತೈಷಿಗಳಿಗೆ ಚುನಾವಣೆ ವೇಳೆ ಕೆಲಸ ಮಾಡದಂತೆ ಬೆದರಿಕೆ ಹಾಕಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ರು.

ಪ್ರಜಪ್ರಭುತ್ವ ವ್ಯವಸ್ಥೆಗೆ ಬಿಜೆಪಿ ಕಳಂಕ ತರುತ್ತಿದೆ ಎಂದ ಮಾಜಿ ಸಿಎಂ ಸಿದ್ದರಾಮಯ್ಯ ಸ್ವಾಯತ್ತ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡಿರುವ ಬಿಜೆಪಿ ಸರ್ಕಾರದ ಈ ನಡೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ನಾವು ಬಿಜೆಪಿಯ ಹೀನ ರಾಜಕೀಯದ ವಿರುದ್ಧ ಹೋರಾಟ ಮಾಡುತ್ತೇವೆ ಎಂದ್ರು.

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೆವಲಾ, ಕಾಂಗ್ರೆಸ್ ಮುಖಂಡ ಕೆ.ಸಿ.ವೇಣುಗೋಪಾಲ್ ಭಾಗವಹಿಸಿದ್ರು

ಹೆಚ್ಚಿನ ಸುದ್ದಿ