ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧ ಪ್ರಾರಂಭವಾದಾಗಿನಿಂದ, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಅನಾರೋಗ್ಯದ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇದೀಗ ಅವರ ಆರೋಗ್ಯ ಗಂಭೀರವಾಗಿದೆ ಎಂದು ವರದಿಯೊಂದು ತಿಳಿಸಿದೆ.
ಪುಟಿನ್ ತೀವ್ರ ತಲೆನೋವು, ಮಂದ ದೃಷ್ಟಿ ಮತ್ತು ನಾಲಿಗೆಯ ಮರಗಟ್ಟುವಿಕೆ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ರ ಜನರಲ್ ಎಸ್‌ವಿಆರ್ ಟೆಲಿಗ್ರಾಮ್ ಚಾನೆಲ್ ವರದಿ ಮಾಡಿದೆ.
ಪುಟಿನ್ ಅವರು “ತಮ್ಮ ಬಲಗೈ ಮತ್ತು ಕಾಲಿನ ಸಂವೇದನೆಯನ್ನು ಭಾಗಶಃ ಕಳೆದುಕೊಂಡಿದ್ದಾರೆ. ಹೀಗಾಗಿ ಅವರಿಗೆ ತುರ್ತು ವೈದ್ಯಕೀಯ ಆರೈಕೆಯ ಅಗತ್ಯವಿದೆ ಎಂದು ವರದಿ ಹೇಳಿದೆ.
