Monday, July 7, 2025
Homeಚುನಾವಣೆ 2023ಕನಕಪುರದಿಂದ ನಾಮಪತ್ರ ಸಲ್ಲಿಸಿದ ಆರ್.ಅಶೋಕ್

ಕನಕಪುರದಿಂದ ನಾಮಪತ್ರ ಸಲ್ಲಿಸಿದ ಆರ್.ಅಶೋಕ್

ಕನಕಪುರ: ಕಂದಾಯ ಸಚಿವ ಆರ್.ಅಶೋಕ್ ಕನಕಪುರದಿಂದ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಸಹಸ್ರಾರು ಅಭಿಮಾನಿಗಳೊಂದಿಗೆ ತೆರೆದ ವಾಹನದಲ್ಲಿ ಭಾರೀ ಮೆರವಣಿಗೆಯಲ್ಲಿ ಬಂದ ಆರ್. ಅಶೋಕ್ ನಾಮಪತ್ರ ಸಲ್ಲಿಸಿದರು.

ಎರಡು ಕ್ಷೇತ್ರಗಳಲ್ಲಿ ಟಿಕೆಟ್ ಗಿಟ್ಟಿಸಿರುವ ಆರ್ ಅಶೋಕ್ ಸೋಮವಾರವಷ್ಟೇ ಪದ್ಮನಾಭನಗರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದರು.


ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭದ್ರಕೋಟೆಯಾಗಿರುವ ಕನಕಪುರ ಕ್ಷೇತ್ರ ಈ ಬಾರಿ ಆರ್. ಅಶೋಕ್ ಸ್ಪರ್ಧೆಯಿಂದಾಗಿ ಹೈವೋಲ್ಟೇಜ್ ಕ್ಷೇತ್ರವಾಗಿ ಪರಿಣಮಿಸಿದೆ. ಎರಡೂ ಪಕ್ಷಗಳಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು, ಜಿದ್ದಾಜಿದ್ದಿನ ಸ್ಪರ್ಧೆಯನ್ನು ನಿರೀಕ್ಷಿಸಲಾಗಿದೆ.

ಹೆಚ್ಚಿನ ಸುದ್ದಿ