Saturday, June 27, 2026
Homeಚುನಾವಣೆ 2023ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ ಬಿಜೆಪಿ ಸೇರ್ಪಡೆ

ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ ಬಿಜೆಪಿ ಸೇರ್ಪಡೆ

ಶಿವಮೊಗ್ಗ: ಹಿರಿಯ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪನವರ ಪುತ್ರಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ರಾಜನಂದಿನಿ ಬಿಜೆಪಿ ಸೇರುವ ಬಗ್ಗೆ ಒಲವು ತೋರಿದ್ದು, ಬುಧವಾರ ಮಾಜಿ ಸಿಎಂ ಯಡಿಯೂರಪ್ಪನವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಸಾಗರ ಕ್ಷೇತ್ರದಿಂದ ವಯೋಮಿತಿಯ ಕಾರಣವೊಡ್ಡಿ ಕಾಂಗ್ರೆಸ್ ತಿಮ್ಮಪ್ಪನವರಿಗೆ ಟಿಕೆಟ್ ನೀಡಲು ನಿರಾಕರಿಸಿತ್ತು. ಆದರೆ ತಮ್ಮ ಪುತ್ರಿಗೆ ಟಿಕೆಟ್ ನೀಡುವಂತೆ ಕಾಗೋಡು ತಿಮ್ಮಪ್ಪ ಮನವಿ ಸಲ್ಲಿಸಿದ್ದರು. ಆದರೆ ಕಾಂಗ್ರೆಸ್ ಬೇಳೂರು ಗೋಪಾಲಕೃಷ್ಣರಿಗೆ ಟಿಕೆಟ್ ನೀಡಿದ್ದು, ರಾಜನಂದಿನಿಯವರ ಅಸಮಾಧಾನಕ್ಕೆ ಕಾರಣವಾಗಿತ್ತು. ಬುಧವಾರ ಅಧಿಕೃತವಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆಯಿದೆ.

ಹೆಚ್ಚಿನ ಸುದ್ದಿ