Monday, March 2, 2026
Homeಚುನಾವಣೆ 202350,000 ಮತಗಳ ಅಂತರದಿಂದ ಗೆದ್ದು ಮತ್ತೊಮ್ಮೆ ವಿಧಾನಸಭೆ ಪ್ರವೇಶ: ಶೆಟ್ಟರ್

50,000 ಮತಗಳ ಅಂತರದಿಂದ ಗೆದ್ದು ಮತ್ತೊಮ್ಮೆ ವಿಧಾನಸಭೆ ಪ್ರವೇಶ: ಶೆಟ್ಟರ್

ಹುಬ್ಬಳ್ಳಿ: 50 ಸಾವಿರ ಮತಗಳ ಅಂತರದಿಂದ ಗೆದ್ದು ಮತ್ತೊಮ್ಮೆ ವಿಧಾನಸಭೆ ಪ್ರವೇಶ ಮಾಡುತ್ತೇನೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್, 50 ಸಾವಿರ ಮತಗಳ ಅಂತರದಿಂದ ಗೆದ್ದು, ಮತ್ತೊಮ್ಮೆ ವಿಧಾನಸಭೆ ಪ್ರವೇಶ ಮಾಡತ್ತೆನೆ. ಮಹೇಶ ತೆಂಗಿನಕಾಯಿ ಗುರುವಿನ ಆಶೀರ್ವಾದ ವಿಚಾರವಾಗಿ ಮಾತನಾಡಿ, ಶಿಷ್ಯನಿಗೆ ಗುರು ಆಶೀರ್ವಾದ ಮಾಡುವುದು ಸಹಜ‌. ನನಗೆ ಜನರ ಆಶೀರ್ವಾದ ಇದೆ.

ನನಗೆ ಟಿಕೆಟ್ ತಪ್ಪಿಸಿದ್ದರಿಂದ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿದ್ದೇನೆ ಎಂದಿದ್ದಾರೆ. ಪಕ್ಷಾಂತರಿಗಳಿಗೆ ಜನ ತಕ್ಕ ಪಾಠ ಕಲಿಸುತ್ತಾರೆಂಬ ನಡ್ಡಾ ಹೇಳಿಕೆಗೆ ಕಿಡಿಕಾರಿರುವ ಅವರು, ಎಲ್ಲದ್ದಕ್ಕೂ ಜನತೆ ಉತ್ತರ ಕೊಡಲಿದ್ದಾರೆ ಎಂದಿದ್ದಾರೆ. ಈ ಚುನಾವಣೆಯಲ್ಲಿ ನನ್ನ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹೆಚ್ಚಿನ ಸುದ್ದಿ