ಮುಂಬೈ: ಬಹುಕೋಟಿ ಉದ್ಯಮಿ ಗೌತಮ್ ಅದಾನಿಯವರಿಗೆ ಇತ್ತೀಚಿಗೆ ಬೆಂಬಲ ಸೂಚಿಸಿ ಮಾತನಾಡಿದ್ದ ಎನ್ ಸಿಪಿ ನಾಯಕ ಶರದ್ ಪವಾರ್ ಇಂದು ಮುಂಬೈಯಲ್ಲಿ ಅದಾನಿಯನ್ನು ಭೇಟಿಯಾಗಿದ್ದಾರೆ.
ಮೂಲಗಳ ಪ್ರಕಾರ ಮುಂಬೈನಲ್ಲಿರುವ ಪವಾರ್ ಅವರ ನಿವಾಸ ಸಿಲ್ವರ್ ಓಕ್‌ನಲ್ಲಿ ನಡೆದ ನಿರ್ಣಾಯಕ ಸಭೆಯು ಸುಮಾರು ಎರಡು ಗಂಟೆಗಳ ಕಾಲ ನಡೆದಿದೆ. ಹಿಂಡನ್ ಬರ್ಗ್ ವರದಿಗೆ ಸಂಬಂಧಿಸಿ ಕಾಂಗ್ರೆಸ್ ಸೇರಿದಂತೆ ಇತರ ವಿರೋಧ ಪಕ್ಷಗಳು ಜಂಟಿ ಸಂಸದೀಯ ಸಮಿತಿ ತನಿಖೆಗೆ ಒತ್ತಾಯಿಸುತ್ತಿರುವ ಸಮಯದಲ್ಲಿ ಅದಾನಿ–ಪವಾರ್ ಭೇಟಿ ಕುತೂಹಲ ಕೆರಳಿಸಿದೆ.
ಇತ್ತೀಚೆಗಷ್ಟೇ ವಿರೋಧ ಪಕ್ಷಗಳು ಅದಾನಿ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದ್ದ ಹೊತ್ತಲ್ಲೇ ಶರದ್ ಪವಾರ್ ಅದಾನಿ ಪರವಾಗಿ ಮಾತನಾಡಿದ್ದರು.