Monday, July 7, 2025
Homeಚುನಾವಣೆ 2023ನನ್ನ ವಿರುದ್ಧ ಅದಾನಿ ಟಿವಿಯಿಂದ ಸುಳ್ಳು ಸುದ್ದಿ ವರದಿ: ಸಿದ್ದರಾಮಯ್ಯ

ನನ್ನ ವಿರುದ್ಧ ಅದಾನಿ ಟಿವಿಯಿಂದ ಸುಳ್ಳು ಸುದ್ದಿ ವರದಿ: ಸಿದ್ದರಾಮಯ್ಯ

ಡಿಕೆ ಶಿವಕುಮಾರ್‌ ರನ್ನು ಹೈಕಮಾಂಡ್‌ ಸಿಎಂ ಮಾಡಲ್ಲ ಎಂದು ಸಿದ್ದರಾಮಯ್ಯ ಹೇಳಿರುವುದಾಗಿ ಎನ್‌ಡಿಟಿವಿ ಮಾಡಿದ್ದ ವರದಿ ಬಗ್ಗೆ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ.

“ಕರ್ನಾಟಕದ ಮುಖ್ಯಮಂತ್ರಿ ಅಭ್ಯರ್ಥಿಯ ಬಗ್ಗೆ ನಾನು ಪ್ರತಿಕ್ರಿಯೆ ನೀಡಿದ್ದೇನೆ ಎಂದು ಆರೋಪಿಸಿ ಎನ್‌ಡಿಟಿವಿ (ಅದಾನಿ ಟಿವಿ) ಪ್ರಕಟಿಸಿದ ಸುದ್ದಿ ಲೇಖನ ಸತ್ಯಕ್ಕೆ ದೂರವಾಗಿದೆ. ನಾನು ಯಾವತ್ತೂ ಅಂತಹ ಕಾಮೆಂಟ್‌ಗಳನ್ನು ಮಾಡಿಲ್ಲ ಮತ್ತು ಅಂತಹ ಕ್ಷುಲ್ಲಕ ರಾಜಕೀಯವನ್ನು ಎಂದಿಗೂ ಮಾಡುವುದಿಲ್ಲ. ಎನ್‌ಡಿಟಿವಿ ಸ್ಪಷ್ಟೀಕರಣವನ್ನು ನೀಡುವಂತೆ ಮತ್ತು ಆಧಾರರಹಿತ ಪೋಸ್ಟ್ ಅನ್ನು ತೆಗೆದುಹಾಕುವಂತೆ ನಾನು ಒತ್ತಾಯಿಸುತ್ತೇನೆ.” ಎಂದು ಸಿದ್ದರಾನಯ್ಯ ಟ್ವೀಟ್‌ ಮಾಡಿದ್ದಾರೆ.

ಡಿಕೆ ಶಿವಕುಮಾರ್‌ ಅವರಿಗೆ ಹೈಕಮಾಂಡ್‌ ಮುಖ್ಯಮಂತ್ರಿ ಸ್ಥಾನ ನೀಡಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆಂದು NDTV ವರದಿ ಮಾಡಿತ್ತು.

“ಮುಖ್ಯಮಂತ್ರಿ ಸ್ಥಾನಕ್ಕೆ ನಾನೂ, ಡಿಕೆಶಿ ಆಕಾಂಕ್ಷಿಗಳು, ಪ್ರಜಾಪ್ರಭುತ್ವದಲ್ಲಿ ಸಿಎಂ ಆಗಬೇಕೆಂದು ಬಯಸುವುದು ತಪ್ಪೇನಿಲ್ಲ. ಆದರೆ, ಸಿಎಂ ಆಗಬೇಕೆಂದರೆ ಶಾಸಕರು ಆಯ್ಕೆ ಮಾಡುತ್ತಾರೆ, ಹೈಕಮಾಂಡ್‌ ತೀರ್ಮಾನವೇ ಅಂತಿಮವಾಗಿರುತ್ತದೆ” ಎಂದು ಸಿದ್ದರಾಮಯ್ಯ ಹೇಳಿರುವುದನ್ನು “ನಾನು ಕೂಡ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿ. ಡಿಕೆ ಶಿವಕುಮಾರ್ ಅವರೂ ಆಕಾಂಕ್ಷಿ. ಆದರೆ, ಅವರಿಗೆ ಹೈಕಮಾಂಡ್ ಮುಖ್ಯಮಂತ್ರಿ ಹುದ್ದೆ ನೀಡಲಾರದು” ಎಂದು ಹೇಳಿರುವುದಾಗಿ ndtv ತನ್ನ ವರದಿಯಲ್ಲಿ ಹೇಳಿತ್ತು.

ಹೆಚ್ಚಿನ ಸುದ್ದಿ