Monday, October 13, 2025
Homeರಾಜಕೀಯಮೀಸಲಾತಿ ನೀತಿ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಮೀಸಲಾತಿ ನೀತಿ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಮೈಸೂರು: ಬಿಜೆಪಿ ಸರ್ಕಾರಕ್ಕೆ ತಳಸಮುದಾಯ, ನಿರ್ಲಕ್ಷಿತ ಸಮುದಾಯದ ಬಗ್ಗೆ ಯಾವ ಕಾಳಜಿಯೂ ಇಲ್ಲ. ಕೇವಲ ಚುನಾವಣಾ ಪ್ರಚಾರಕ್ಕೆ ಮೀಸಲಾತಿ ವಿವಾದವನ್ನು ಹುಟ್ಟುಹಾಕಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ. ರಾಹುಲ್ ಗಾಂಧಿ ಲೋಕಸಭಾ ಅನರ್ಹತೆ ವಿರೋಧಿಸಿ ಭಾನುವಾರ ಹಮ್ಮಿಕೊಳ್ಳಲಾಗಿರುವ ಸಂವಿಧಾನ ಬಚಾವ್ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಮೈಸೂರಿಗೆ ಆಗಮಿಸಿದ ಅವರು, ಈ ಹಿಂದೆ 2ಎ, 2ಬಿ, 3ಎ ಮತ್ತು 3ಬಿ ಮೀಸಲಾತಿಗಳನ್ನು ಸೃಷ್ಟಿಸಿದ ಯಾರೂ ತಾವು ಜೇನುಗೂಡಿಗೆ ಕೈಹಾಕಿದ್ದೇವೆ ಎಂದು ಹೇಳಿಕೊಂಡಿರಲಿಲ್ಲ ಎಂದು ಲೇವಡಿ ಮಾಡಿದರು.
ಕೋಟ್ಯಂತರ ರೂ. ಹಣ ಖರ್ಚು ಮಾಡಿ ನನ್ನ ಅಧಿಕಾರಾವಧಿಯಲ್ಲಿ ಸಿದ್ದಪಡಿಸಲಾಗಿದ್ದ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಲು ಬಿಜೆಪಿ ಸರ್ಕಾರಕ್ಕೆ ಆಸಕ್ತಿಯಿಲ್ಲ. ಈ ಜಾತಿವರದಿಯಿಂದ ಯಾವ ಸಮುದಾಯಕ್ಕೆ ಹೆಚ್ಚು ಮೀಸಲಾತಿ ಅಗತ್ಯವಿದೆ ಎಂದು ಸ್ಪಷ್ಟವಾಗಿ ತಿಳಿಯಬಹುದಾಗಿತ್ತು ಎಂದು ಅಭಿಪ್ರಾಯಪಟ್ಟ ಸಿದ್ದರಾಮಯ್ಯ, ಮೂರು ವರ್ಷಗಳ ಕಾಲ ವರದಿಯನ್ನು ಸುಮ್ಮನೆ ಇಟ್ಟುಕೊಂಡಿದ್ದು ತಪ್ಪಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಮೀಸಲಾತಿ ಗರಿಷ್ಠಮಿತಿಯನ್ನು ನಿಗದಿಗೊಳಿಸಿರುವುದನ್ನು ಯಾವ ಕಾರಣಕ್ಕೂ ಬದಲಾಯಿಸಲು ಸಾಧ್ಯವಿಲ್ಲ, ಅದನ್ನು ಬದಲಾಯಿಸದೇ ಮೀಸಲಾತಿ ಹೆಚ್ಚಿಸಿರುವುದನ್ನು ಊರ್ಜಿತಗೊಳಿಸಲು ಸಾಧ್ಯವಿಲ್ಲ. ಹೀಗಾಗಿ ಕೇವಲ ಚುನಾವಣಾ ಕಾರಣಕ್ಕಾಗಿ ಘೋಷಣೆ ಮಾಡಿ ಬೇಳೆ ಬೇಯಿಸಿಕೊಳ್ಳಲಾಗುತ್ತದೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಹೆಚ್ಚಿನ ಸುದ್ದಿ