ಕೋಲಾರ: ಮೇ 10ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಯಾವ ಪಕ್ಷ ಅಧಿಕಾರ ಮಾಡಲು ಅವಕಾಶ ಕೊಟ್ಟರೆ ರಾಜ್ಯದ ಜನರು, ರಾಜ್ಯದ ನೆಲ, ಜಲ, ಭಾಷೆ ರಕ್ಷಣೆ ಮಾಡುತ್ತಾರೆ ಎಂದು ನೀವು ಆಲೋಚನೆ ಮಾಡಬೇಕು. ಕೇಂದ್ರದಲ್ಲಿ ಕಳೆದ 9 ವರ್ಷಗಳಿಂದ ಬಿಜೆಪಿ ಆಡಳಿತ ಮಾಡುತ್ತಿದೆ. ಇಲ್ಲೂ ಕೂಡಾ ಬಿಜೆಪಿಯೇ ಆಡಳಿತ ನಡೆಸುತ್ತಿದೆ.
ಮೋದಿ ಹಾಗೂ ಬೊಮ್ಮಾಯಿ ಅವರು ನಮ್ಮದು ಡಬಲ್ ಇಂಜಿನ್ ಸರ್ಕಾರ ರಾಜ್ಯದ ಅಭಿವೃದ್ಧಿ ವೇಗವಾಗಿ ಆಗಲಿದೆ ಎಂದು ಹೇಳಿದ್ದರು. ಈ ಡಬಲ್ ಇಂಜಿನ್ ಸರ್ಕಾರ ಬಂದ ನಂತರ ರಾಜ್ಯ ಇಷ್ಟು ಕೆಟ್ಟ ಹೆಸರನ್ನು ಹಿಂದೆಂದೂ ತೆಗೆದುಕೊಂಡಿರಲಿಲ್ಲ. ಗುತ್ತಿಗೆದಾರರ ಸಂಘ, ಅನುದಾನರಹಿತ ಶಿಕ್ಷಣ ಸಂಸ್ಥೆ ರುಪ್ಸಾದವರು ರಾಜ್ಯದಲ್ಲಿ ಪ್ರತಿ ಕೆಲಸಕ್ಕೆ ಈ ಸರ್ಕಾರ 40% ಕಮಿಷನ್ ತೆಗೆದುಕೊಳ್ಳುತ್ತಾರೆ ಎಂದು ಪ್ರಧಾನಿಗೆ ಪತ್ರ ಬರೆದಿದ್ದು, ರಾಜ್ಯದ ಇತಿಹಾಸದಲ್ಲಿ ಇದೇ ಮೊದಲು
ಕರ್ನಾಟಕದ ಬ್ಯಾಂಕುಗಳನ್ನು ನುಂಗಿ ನೀರು ಕುಡಿದು ಆಗಿದೆ. ಈಗ ನಮ್ಮ ಹೆಮ್ಮೆಯ ನಂದಿನಿ ಸಂಸ್ಥೆ ನುಂಗಲು ಹೊರಟಿದ್ದಾರೆ. ಇದು ನಮ್ಮ ಕನ್ನಡಿಗರ ಮರ್ಯಾದೆಯ ಪ್ರಶ್ನೆ. ನಾವೆಲ್ಲರೂ ಕನ್ನಡಿಗರು ಅಮೂಲ್ ಉತ್ಪನ್ನಗಳನ್ನು ಖರೀದಿಸದೇ ನಂದಿನಿ ಉತ್ಪನ್ನಗಳನ್ನು ಮಾತ್ರ ಖರೀದಿ ಮಾಡುತ್ತೇವೆ ಎಂಬ ಶಪಥ ಮಾಡಬೇಕು. ಆಮೂಲಕ ಕೇಂದ್ರದ ಹುನ್ನಾರವನ್ನು ತಡೆಗಟ್ಟಬೇಕು ಎಂದು ಕರೆ ಕೊಟ್ಟರು
ಇದೇ ವೇಳೆ ಬಡವರಿಗೆ ನೀಡುತ್ತಿರುವ ಅಕ್ಕಿ ಪ್ರಮಾಣ ಕಡಿತ, ನಿರುದ್ಯೋಗ ಸಮಸ್ಯೆ ಸೇರಿದಂತೆ ಬಿಜೆಪಿಯ ವೈಫಲ್ಯತೆಗಳ ಬಗ್ಗೆ ಕಿಡಿ ಕಾರಿದ ಸಿದ್ದರಾಮಯ್ಯ ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದ್ರು