Tuesday, July 8, 2025
Homeಚುನಾವಣೆ 2023ನನಗೆ ಕ್ಷೇತ್ರವಿಲ್ಲವೆಂದ ಈಶ್ವರಪ್ಪಗೆ ಟಿಕೆಟೇ ಇಲ್ಲ: ಸಿದ್ದರಾಮಯ್ಯ ವ್ಯಂಗ್ಯ

ನನಗೆ ಕ್ಷೇತ್ರವಿಲ್ಲವೆಂದ ಈಶ್ವರಪ್ಪಗೆ ಟಿಕೆಟೇ ಇಲ್ಲ: ಸಿದ್ದರಾಮಯ್ಯ ವ್ಯಂಗ್ಯ

ಬೆಳಗಾವಿ: ಬಿಜೆಪಿ ಹಿರಿಯ ನಾಯಕ ಕೆಎಸ್‌ ಈಶ್ವರಪ್ಪ ಅವರಿಗೆ ಟಿಕೆಟ್‌ ಕೈ ತಪ್ಪಿದ ಕುರಿತು ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಈಶ್ವರಪ್ಪರ ಕಾಲೆಳೆದಿದ್ದಾರೆ. ಈ ಬಾರಿ ಚುನಾವಣೆಗೆ ಸ್ಪರ್ಧಿಸಲು ನನಗೆ ಕ್ಷೇತ್ರ ಸಿಗುವುದಿಲ್ಲ ಎಂದು ಟೀಕಿಸುತ್ತಿದ್ದ ಈಶ್ವರಪ್ಪಗೆ ಬಿಜೆಪಿ ಟಿಕೆಟ್‌ ಅನ್ನೇ ನೀಡಲಿಲ್ಲ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಕೋಲಾರದಿಂದ ಸ್ಪರ್ಧಿಸದಂತೆ ಹೈಕಮಾಂಡ್‌ ಸೂಚಿಸಿದ್ದಾಗ ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಗೊಂದಲ ಏರ್ಪಟ್ಟಿತ್ತು. ಈ ವೇಳೆ , ಮಾಜಿ ಸಿಎಂಗೆ ಸ್ಪರ್ಧಿಸಲು ಕ್ಷೇತ್ರವಿಲ್ಲ ಎಂದು ಈಶ್ವರಪ್ಪ ಲೇವಡಿ ಮಾಡಿದ್ದರು. ಇದಕ್ಕೆ, ಸಿದ್ದರಾಮಯ್ಯ ಈಗ ಪ್ರತಿಕ್ರಿಯಿಸಿದ್ದಾರೆ.

ಅದಾಗ್ಯೂ, ಈಶ್ವರಪ್ಪರನ್ನು ಬಿಜೆಪಿ ನಡೆಸಿಕೊಂಡ ರೀತಿ ಸರಿ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈಶ್ವರಪ್ಪ, ಲಕ್ಷ್ಮಣ ಸವದಿ, ಜಗದೀಶ ಶೆಟ್ಟರ್ ಸೇರಿ ಹಲವು ಹಿರಿಯ ನಾಯಕರನ್ನು ಬಿಜೆಪಿಯವರು ನಡೆಸಿಕೊಂಡ ರೀತಿ ಸರಿಯಾಗಿಲ್ಲ. ಪಕ್ಷ ಕಟ್ಟಿದ ನಾಯಕರನ್ನು ಅಗತ್ಯಕ್ಕೆ ತಕ್ಕಂತೆ ಬಳಿಸಿಕೊಂಡು ಅವರಿಗೆ ಬಿಜೆಪಿ ಅನ್ಯಾಯ ಮಾಡಿದೆ’ ಎಂದು ಹೇಳಿದ್ದಾರೆ.

‘ಜಗದೀಶ ಶೆಟ್ಟರ್ ಕಾಂಗ್ರೆಸ್ ಸೇರುವ ಬಗ್ಗೆ ಚರ್ಚೆಯಾಗಿಲ್ಲ. ಹಾಗೊಂದು ವೇಳೆ ಸೇರುವುದಾದರೆ ಸ್ವಾಗತಿಸುತ್ತೇವೆ. ಬಿಜೆಪಿಯ ಹಲವು ಶಾಸಕರು ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದಾರೆ’ ಎಂದೂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹೆಚ್ಚಿನ ಸುದ್ದಿ