ಮೈಸೂರು: ತೀವ್ರ ಜಿದ್ದಾಜಿದ್ದಿನ ಕ್ಷೇತ್ರವಾಗಿ ಮಾರ್ಪಟ್ಟಿರುವ ಮೈಸೂರಿನ ವರುಣಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ನಾಮಪತ್ರ ಸಲ್ಲಿಸಿದ್ರು. ನಂಜನಗೂಡಿನ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ರು. ಸಿದ್ದರಾಮಯ್ಯಗೆ ಮಾಜಿ ಸಚಿವ ಹೆಚ್‌ಸಿ ಮಹದೇವಪ್ಪ ಸಾಥ್ ನೀಡಿದ್ರು.
ನಾಮಪತ್ರ ಸಲ್ಲಿಕೆಗೂ ಮುನ್ನ ಲಕ್ಷಾಂತರ ಕಾರ್ಯಕರ್ತರು ಹಾಗೂ ಅಭಿಮಾನಿಗಳೊಂದಿಗೆ ರೋಡ್ ಶೋ ನಡೆಸಿದ ಸಿದ್ದರಾಮಯ್ಯ, ಸಿದ್ದರಾಮನ ಹುಂಡಿಯ ಸಿದ್ದರಾಮೇಶ್ವರ ದೇವಾಲಯ ಹಾಗೂ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ರು.
ನಂಜನಗೂಡಿನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ನೆರೆದಿದ್ದ ಲಕ್ಷಾಂತರ ಮಂದಿ ಜನತೆಯಲ್ಲಿ ತಮನ್ನು ಬೆಂಬಲಿಸುವಂತೆ ಸಿದ್ದರಾಮಯ್ಯ ಮನವಿ ಮಾಡಿದ್ರು. ಇಂದು ಸಿದ್ದರಾಮಯ್ಯ ರೋಡ್ ಶೋ ಹಾಗೂ ಸಾರ್ವಜನಿಕ ಸಭೆ ವೇಳೆ ಉಪಸ್ಥಿತರಿದ್ದ ಸಿದ್ದರಾಮಯ್ಯ ಮೊಮ್ಮಗ ಧವನ್ ರಾಕೇಶ್ ಎಲ್ಲರ ಗಮನ ಸೆಳೆದ್ರು