Saturday, June 6, 2026
Homeಚುನಾವಣೆ 2023ಪರಮೇಶ್ವರ್‌ ನಾಮಪತ್ರ ಸಲ್ಲಿಕೆ ವೇಳೆ ಕಲ್ಲು ತೂರಾಟ: ಪೊಲೀಸ್‌ ಸಿಬ್ಬಂದಿಗೆ ಗಾಯ

ಪರಮೇಶ್ವರ್‌ ನಾಮಪತ್ರ ಸಲ್ಲಿಕೆ ವೇಳೆ ಕಲ್ಲು ತೂರಾಟ: ಪೊಲೀಸ್‌ ಸಿಬ್ಬಂದಿಗೆ ಗಾಯ

ತುಮಕೂರು: ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ. ಪರಮೇಶ್ವರ್ ನಾಮಪತ್ರ ಸಲ್ಲಿಸಲು ತೆರಳಿದಾಗ ಕಲ್ಲು ತೂರಾಟ ನಡೆದಿರುವ ಬಗ್ಗೆ ವರದಿಯಾಗಿದೆ.

ಪರಮೇಶ್ವರ್‌ ತಾಲೂಕು ಕಛೇರಿಯೊಳಗೆ ಹೋದಾಗ ಯಾರೋ ಕಿಡಿಗೇಟಿಗಳು ಕಲ್ಲು ತೂರಾಟ ನಡೆಸಿದ್ದು, ಮಹಿಳಾ ಪೊಲೀಸ್‌ ಸಿಬ್ಬಂದಿಗೆ ಕಲ್ಲೇಟು ಆಗಿದೆ ಎಂದು ವರದಿಯಾಗಿದೆ.

ಗಾಯಗೊಂಡ ಮಹಿಳಾ ಪೊಲೀಸ್​ ಸಿಬ್ಬಂದಿಯನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ನಾಮಪತ್ರ ಸಲ್ಲಿಕೆ ಬಳಿಕ ಪರಮೇಶ್ವರ್​ ಪ್ರತಿಕ್ರಿಯೆ ನೀಡಿದ್ದು, ಕಚೇರಿ ಮೇಲೆ ಯಾರು ಕಲ್ಲು ಎಸೆದರು ಅಂತಾ ನನಗೆ ಗೊತ್ತಿಲ್ಲ. ನಾನು ನಾಮಪತ್ರ ಸಲ್ಲಿಸಲು ಒಳಗೆ ಹೋದಾಗ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸರ ಬಳಿ ಮಾಹಿತಿ ಪಡೆಯುತ್ತೇನೆ ಎಂದು ಹೇಳಿದ್ದಾರೆ.

ಹೆಚ್ಚಿನ ಸುದ್ದಿ