ಹುಬ್ಬಳ್ಳಿ: ರಾಜ್ಯ ವಿಧಾನಸಭಾ ಚುನಾವಣಾ ಹಿನ್ನೆಲೆ ಹುಬ್ಬಳ್ಳಿಗೆ ಆಗಮಿಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಅರವಿಂದ್ ಬೆಲ್ಲದ್ ನಿವಾಸದಲ್ಲಿ ರಹಸ್ಯ ಸಭೆ ನಡೆಸಿದ್ದಾರೆ.
ರಾಜ್ಯ ಚುನಾವಣೆ ಹಿನ್ನೆಲೆ ಎರಡು ದಿನ ಹುಬ್ಬಳ್ಳಿ ಪ್ರಾಸದಲ್ಲಿರುವ ಜೆ.ಪಿ.ನಡ್ಡಾ, ಹುಬ್ಬಳ್ಳಿ ಆರಾಧ್ಯ ದೈವ ಸಿದ್ಧಾರೂಢ ಮಠಕ್ಕೆ ಭೇಟಿಕೊಟ್ಟು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಅರವಿಂದ್ ಬೆಲ್ಲದ್ ಮನೆಗೆ ಬೇಟಿಕೊಟ್ಟಿದ್ದು, ಟಿಕೆಟ್ ವಿಚಾರವಾಗಿ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಿರುದ್ಧ ತಂತ್ರ ರೂಪಿಸಲು ರಹಸ್ಯ ಸಭೆ ನಡೆಸಿದ್ದಾರೆ.
ಈ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಜಗದೀಶ್ ಶೆಟ್ಟರ್ ಗೆಲುವು ಸಾಧಿಸಬಾರದು ಎಂದು ಖಡಕ್
ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಈ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ, ಸಚಿವ ಗೋವಿಂದ ಕಾರಜೋಳ, ಬಿಜೆಪಿ ಅಭ್ಯರ್ಥಿ ಮಹೇಶ್ ತೆಂಗಿನಕಾಯಿ, ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಹಾಗೂ ಜಿಲ್ಲಾಧ್ಯಕ್ಷ ಸಂಜಯ್ ಕಪಟ್ಕರ್ ಉಪಸ್ಥಿತರಿದ್ದರು.