Tuesday, July 8, 2025
Homeಟಾಪ್ ನ್ಯೂಸ್ಸುಪ್ರೀಂ ಕೋರ್ಟ್‌ನಲ್ಲಿ ವಿನಯ್ ಕುಲಕರ್ಣಿ ಅರ್ಜಿ ವಜಾ

ಸುಪ್ರೀಂ ಕೋರ್ಟ್‌ನಲ್ಲಿ ವಿನಯ್ ಕುಲಕರ್ಣಿ ಅರ್ಜಿ ವಜಾ

ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಹೆನ್ನಡೆಯಾಗಿದೆ. ಯೋಗೀಶ್‌ ಗೌಡ ಕೊಲೆಗೆ ಸಂಚು ರೂಪಿಸಿದ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದಿರುವ ಕಾಂಗ್ರೆಸ್ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.

ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತ್‌ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೀಶ ಗೌಡ ಕೊಲೆ ಪ್ರಕರಣಲ್ಲಿ ಸಿಲುಕಿ 9 ತಿಂಗಳು ಸೆರೆವಾಸ ಅನುಭವಿಸಿದ್ದ ವಿನಯ್‌ ಕುಲಕರ್ಣಿಗೆ ಧಾರವಾಡ ಪ್ರವೇಶ ನಿರ್ಬಂಧಿಸಿ ಬೇಲ್ ನೀಡಲಾಗಿತ್ತು. ಧಾರವಾಡ ಪ್ರವೇಶ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ವಿನಯ್‌ ಕುಲಕರ್ಣಿ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ ಸಿಬಿಐ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆ ಸುಪ್ರೀಂ ಕೋರ್ಟ್‌ನಲ್ಲೂ ಅರ್ಜಿ ವಜಾಗೊಂಡಿದ್ದು, ಕುಲಕರ್ಣಿ ಇನ್ನೂ ಕೆಲದ ದಿನಗಳು ಧಾರವಾಡ ಪ್ರವೇಶ ಕಷ್ಟಸಾಧ್ಯವಾಗಿದೆ

ಹೆಚ್ಚಿನ ಸುದ್ದಿ