Sunday, October 12, 2025
Homeಸಿನಿಮಾಟಾಲಿವುಡ್ ಹಾಸ್ಯ ನಟ ಅಲ್ಲು ರಮೇಶ್ ನಿಧನ

ಟಾಲಿವುಡ್ ಹಾಸ್ಯ ನಟ ಅಲ್ಲು ರಮೇಶ್ ನಿಧನ

ಹೈದರಾಬಾದ್: ತೆಲುಗಿನ ಹಾಸ್ಯ ನಟ ಅಲ್ಲು ರಮೇಶ್ ಮಂಗಳವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಿಧನ ವಾರ್ತೆಯನ್ನು ಕುಟುಂಬದವರು ಖಚಿತಪಡಿಸಿದ್ದಿ, ರಮೇಶ್ ವಿಶಾಖಪಟ್ಟಣದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.

ಅವರ ಹಠಾತ್ ನಿಧನಕ್ಕೆ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ. ಅಲ್ಲು ರಮೇಶ್ ಹಲವು ವೆಬ್ ಸಿರೀಸ್ ಹಾಗೂ ಸಿನಿಮಾಗಳಲ್ಲಿ ನಟಿಸಿದ್ದರು. ಇತ್ತೀಚೆಗೆ ಬಿಡುಗಡೆಯಾದ ನೆಪೋಲಿಯನ್ ಚಿತ್ರದಲ್ಲಿ ನಟಿಸಿದ್ದರು. ಮಧುರಾ ವೈನ್ಸ್, ರಾವಣ ದೇಶಂ ಸಿನಿಮಾಗಳಲ್ಲೂ ಅವರು ಬಣ್ಣ ಹಚ್ಚಿದ್ದಾರೆ.

ಆರಂಭದಲ್ಲಿ ವಿಶಾಖಪಟ್ಟಣದಲ್ಲಿ ನಾಟಕಗಳಲ್ಲಿ ನಟಿಸುತ್ತಿದ್ದ ರಮೇಶ್ ಬಳಿಕ ಚಿತ್ರರಂಗಕ್ಕೆ ಕಾಲಿಟ್ಟರು. ಅನೇಕ ತೆಲುಗು ಸಿನಿಮಾಗಳಲ್ಲಿ ಹಾಸ್ಯನಟನ ಪಾತ್ರವನ್ನು ನಿರ್ವಹಿಸಿದರು. ಯೂಟ್ಯೂಬ್‌ನಲ್ಲಿ ಪ್ರಸಾರವಾಗುವ ಮಾ ವಿದಾಕುಲು ವೆಬ್ ಸರಣಿಯಲ್ಲಿ ನಟಿಸುವ ಮೂಲಕ ಹೆಚ್ಚು ಗುರುತಿಸಿಕೊಂಡರು. ಟಾಲಿವುಡ್ ಸಿನಿಮಾಗಳಲ್ಲಿ ಸಣ್ಣಪುಟ್ಟ ಪಾತ್ರಗಳನ್ನು ನಿರ್ವಹಿಸಿದರೂ ತಮ್ಮ ವಿಶಿಷ್ಟ ನಟನೆ ಮೂಲಕ ಅವರು ಗಮನ ಸೆಳೆದಿದ್ದರು.
ಅಲ್ಲು ರಮೇಶ್​ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಹೆಚ್ಚಿನ ಸುದ್ದಿ