ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ಬೆಂಗಳೂರಿಗೆ ಬರುತ್ತಿದ್ದು ನಗರದ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹೇರಲಾಗಿದೆ. ಬೆಂಗಳೂರಿನ ಕೆಲವು ಮಾರ್ಗಗಳಲ್ಲಿ ನಿರ್ದಿಷ್ಟ ಅವಧಿಗೆ ವಾನಹ ಸಂಚಾರ ನಿರ್ಬಂಧ ಹೇರಲಾಗಿದೆ. ಈ ಬಗ್ಗೆ ವಾಹನ ಸವಾರರು ಹಾಗೂ ಸಾರ್ವಜನಿಕರು ಗಮನ ಹರಿಸುವಂತೆ ಬೆಂಗಳೂರು ನಗರ ಸಂಚಾರ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ. ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ಈ ಕೆಳಗೆ ಉಲ್ಲೇಖಿಸಿರುವ ಮಾರ್ಗಗಳಲ್ಲಿ ಸಂಚರಿಸದಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.
ಓಲ್ಡ್ ಏರ್‌ಪೋರ್ಟ್ ರಸ್ತೆ, ಮೈಸೂರು ರಸ್ತೆ, ಎನ್.ಆರ್ ರಸ್ತೆ, ನೃಪತುಂಗ ರಸ್ತೆ, ಶೇಷಾದ್ರಿ ರಸ್ತೆ, ಪ್ಯಾಲೇಸ್ ರೋಡ್, ರೇಸ್‌ಕೋರ್ಸ್ ರೋಡ್ ಮತ್ತು ಕೆಂಗೇರಿಯಿಂದ ಕೊಮ್ಮಘಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಬೆಳಿಗ್ಗೆ 6 ರಿಂದ ಮಧ್ಯಾಹ್ನ 4 ಗಂಡೆಯವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ

