Monday, March 2, 2026
Homeಚುನಾವಣೆ 2023ಬಿಜೆಪಿ ಸ್ಟಾರ್ ಕ್ಯಾಂಪೇನರ್ಸ್ ಪಟ್ಟಿಯಲ್ಲಿ ವಿಜಯೇಂದ್ರ, ಪ್ರತಾಪ್ ಸಿಂಹ, ತೇಜಸ್ವಿ ಹೆಸರಿಲ್ಲ!

ಬಿಜೆಪಿ ಸ್ಟಾರ್ ಕ್ಯಾಂಪೇನರ್ಸ್ ಪಟ್ಟಿಯಲ್ಲಿ ವಿಜಯೇಂದ್ರ, ಪ್ರತಾಪ್ ಸಿಂಹ, ತೇಜಸ್ವಿ ಹೆಸರಿಲ್ಲ!

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಕಾವು ಜೋರಾಗಿದೆ. ಬಿಜೆಪಿ ತನ್ನ ಸ್ಟಾರ್ ಪ್ರಚಾರಕರ ಅಥವಾ ಸ್ಟಾರ್‌ ಕ್ಯಾಂಪೇನರ್ಸ್ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಆದರೆ, ಆ ಪಟ್ಟಿಯಲ್ಲಿ ತೇಜಸ್ವಿ ಸೂರ್ಯ, ಪ್ರತಾಪ ಸಿಂಹ, ಬಿವೈ ವಿಜಯೇಂದ್ರ ಮೊದಲಾದವರ ಹೆಸರು ಇಲ್ಲದಿರುವುದು ಕುಟೂಹಲಕ್ಕೆ ಕಾರಣವಾಗಿದೆ.

ಬಿಜೆಪಿ ಬಿಡುಗಡೆಗೊಳಿಸಿದ 40 ತಾರಾ ಪ್ರಚಾರಕರ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹಾಗೂ ಕೇಂದ್ರ ಮತ್ತು ರಾಜ್ಯಗಳ ಹಲವು ಹಿರಿಯ ಬಿಜೆಪಿ ನಾಯಕರ ಹೆಸರುಗಳಿವೆ.

ಇತ್ತೀಚೆಗೆ ಚೆನ್ನೈ ವಿಮಾನ ನಿಲ್ದಾಣದಲ್ಲಿ ವಿಮಾನವೊಂದರ ಎಕ್ಸಿಟ್‌ ಡೋರ್‌ ಅನ್ನು ಓಪನ್‌ ಮಾಡಿ ರಾಷ್ಟ್ರ ಮಟ್ಟದಲ್ಲಿ ಟ್ರೋಲ್‌ಗೆ ಗುರಿಯಾಗಿರುವ ತೇಜಸ್ವಿ ಸೂರ್ಯರನ್ನು ಉದ್ದೇಶಪೂರ್ವಕವಾಗಿ ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ಹೇಳಲಾಗಿದೆ.

 

 

ಹೆಚ್ಚಿನ ಸುದ್ದಿ