Monday, March 2, 2026
Homeಟಾಪ್ ನ್ಯೂಸ್ವೈಎಸ್‌ವಿ ದತ್ತಾ ವಿರುದ್ಧ ಜಾಮೀನು ರಹಿತ ವಾರೆಂಟ್

ವೈಎಸ್‌ವಿ ದತ್ತಾ ವಿರುದ್ಧ ಜಾಮೀನು ರಹಿತ ವಾರೆಂಟ್

ಮಾಜಿ ಶಾಸಕ ಹಾಗೂ ಕಡೂರು ವಿಧಾನ ಸಭಾಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವೈ.ಎಸ್.ವಿ ದತ್ತಾ ವಿರುದ್ಧ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿ ಆದೇಶಿದೆ. ಏ. 26ರಂದು ದತ್ತವರನ್ನು ನ್ಯಾಯಾಲಯಕ್ಕೆ ಹಾಜರಿ ಪಡಿಸುವಂತೆ ಸೂಚಿಸಿ, ವಿಚಾರಣೆ ಮುಂದೂಡಿದ್ದಾರೆ.

ಚೆಕ್ ಬೌನ್ಸ್ ಆರೋಪಕ್ಕೆ ಸಂಬಂಧಿಸಿದಂತೆ ಸಿ. ಎಸ್ ಸೋಮೇಗೌಡ ಇತರರು ಸಲ್ಲಿಸಿದ್ದ ಖಾಸಗಿ ದೂರು ವಿಚಾರಣೆ ನಡೆಸಿದ ನ್ಯಾಯಾಲಯದ (42ನೇ ಎಸಿಎಂಎಂ ನ್ಯಾಯಾಲಯ) ನ್ಯಾ. ಜೆ. ಪ್ರೀತ್ ಅವರು, ಶನಿವಾರ ಬಂಧನ ರಹಿತ ವಾರಂಟ್ ಜಾರಿ ಮಾಡಿದ್ದಾರೆ.

ಕಳೆದ ವಿಚಾರಣೆಯಲ್ಲಿ ದತ್ತಾ ಅವರು, ಏ. 15ರಂದು ದೂರುದಾರರಿಂದ ಪಡೆದುಕೊಂಡಿರುವ ಹಣವನ್ನು ಹಿಂದಿರುಗಿಸುವುದಾಗಿ ಭರವಸೆ ನೀಡಿದ್ದರು. ಅದರಂತೆ ಇಂದು ಪಾವತಿ ಮಾಡಬೇಕಾಗಿತ್ತು. ವಿಚಾರಣೆ ವೇಳೆ ದತ್ತ ಅವರ ಪರ ವಕೀಲರು, ನಮ್ಮ ಕಕ್ಷಿದಾರರಿಗೆ ಖುದ್ದು ಹಾಜರಿಗೆ ವಿನಾಯಿತಿ ನೀಡುವಂತೆ ಕೋರಿದ್ದರು. ಮನವಿಯನ್ನು ತಿರಸ್ಕರಿಸಿದ ನ್ಯಾಯಾಧೀಶರು, ಜಾಮೀನು ರಹಿತ ವಾರಂಟ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿದರು. ಪ್ರಕರಣ ಸಂಬಂಧ ಈಗಾಗಲೇ ನ್ಯಾಯಾಲಯ ಹಲವು ಬಾರಿ ವಾರಂಟ್ ನೀಡಿದ್ದರೂ ದತ್ತ ಹಾಜರಾಗಿರಲಿಲ್ಲ.

ಅಲ್ಲದೇ, ಕಳೆದ ವಿಚಾರಣೆಯಲ್ಲಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಿಂದ ಜಾಮೀನು ರಹಿತ ವಾರಂಟ್ ಜಾರಿ ಮಾಡುವಂತೆ ನ್ಯಾಯಾಲಯ ಸೂಚನೆ ನೀಡಿತ್ತು. 2022ರಲ್ಲಿ ಸೋಮಶೇಖರ್ ಸೇರಿದಂತೆ ಇತರರು ದತ್ತಾ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದು, ಇಂದು ಸಮನ್ಸ್ ಜಾರಿ ಮಾಡಿದೆ. ಮೂರು ಪ್ರತ್ಯೇಕ ಪ್ರಕರಣಗಳಗಳು ಇದೇ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿವೆ.

ಹೆಚ್ಚಿನ ಸುದ್ದಿ