ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿ ಮಾದಿಗ ಸಮುದಾಯಕ್ಕೆ ನ್ಯಾಯಯುತ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಬೇಕು. ಅದರಲ್ಲೂ ಹಿರಿಯ ನಾಯಕ ಕೆ.ಎಚ್. ಮುನಿಯಪ್ಪ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ನೇಮಿಸಬೇಕೆಂದು ‘ಕರ್ನಾಟಕ ಮಾದರ ಮಹಾಸಭೆ’ ಸೇರಿದಂತೆ ವಿವಿಧ ಸಂಘಟನೆಗಳು ಒತ್ತಾಯಿಸಿವೆ.
ಈ ಕುರಿತು ಸರ್ಕಾರಕ್ಕೆ ಮನವಿ ಸಲ್ಲಿಸಿರುವ ಸಮುದಾಯದ ಮುಖಂಡರು, ಸುದೀರ್ಘ ರಾಜಕೀಯ ಅನುಭವ ಹೊಂದಿರುವ ಕೆ.ಎಚ್. ಮುನಿಯಪ್ಪ ಅವರು ಐದು ದಶಕಗಳಿಂದ ಪಕ್ಷ ನಿಷ್ಠೆ ಹಾಗೂ ಬದ್ಧತೆಯಿಂದ ಸೇವೆ ಸಲ್ಲಿಸಿದ್ದಾರೆ. ಏಳು ಬಾರಿ ಲೋಕಸಭಾ ಸದಸ್ಯರಾಗಿ, ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿರುವ ಅವರು, ಹಿಂದುಳಿದ ವರ್ಗಗಳ ಹಿತಕ್ಕಾಗಿ ನಿರಂತರವಾಗಿ ಧ್ವನಿ ಎತ್ತಿದ್ದಾರೆ ಎಂದು ತಿಳಿಸಿದ್ದಾರೆ.

module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: auto;albedo: ;confidence: ;motionLevel: 0;weatherinfo: null;temperature: 47;
ಪ್ರಮುಖ ಬೇಡಿಕೆಗಳು:
ಉಪಮುಖ್ಯಮಂತ್ರಿ ಸ್ಥಾನ: ಕೆ.ಎಚ್. ಮುನಿಯಪ್ಪ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ನೇಮಿಸುವುದರ ಜೊತೆಗೆ, ಸಮುದಾಯದ ಇತರ ಮೂವರು ನಾಯಕರಿಗೆ ಸಚಿವ ಸ್ಥಾನ ನೀಡಬೇಕು.
ರಾಜಕೀಯ ಪ್ರಾತಿನಿಧ್ಯ:
ಸ್ವಾತಂತ್ರ್ಯಾನಂತರದ ಅವಧಿಯಲ್ಲಿ ಮಾದಿಗ ಸಮುದಾಯಕ್ಕೆ ಉಪಮುಖ್ಯಮಂತ್ರಿ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಿಲ್ಲ ಎಂಬ ಅಸಮಾಧಾನವಿದ್ದು, ಈ ಬಾರಿಯಾದರೂ ಸಮುದಾಯದ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು.
ಅಧಿಕಾರ ಹಂಚಿಕೆ:ರಾಜ್ಯದಲ್ಲಿನ 36 ಮೀಸಲು ವಿಧಾನಸಭಾ ಕ್ಷೇತ್ರಗಳ ಪೈಕಿ, ವಿವಿಧ ಸಮುದಾಯಗಳಿಗೆ ದೊರೆತಿರುವ ರಾಜಕೀಯ ಪ್ರಾತಿನಿಧ್ಯದ ಅಸಮತೋಲನವನ್ನು ಸರಿಪಡಿಸಬೇಕಿದೆ.

module: video;hw-remosaic: false;touch: (-1.0, -1.0);sceneMode: null;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: off;albedo: ;confidence: ;motionLevel: -1;weatherinfo: null;temperature: 43;
ಹೊಣೆಗಾರಿಕೆ:ಸದ್ಯ ಮಾದಿಗ ಸಮುದಾಯದ ನಾಯಕರಿಗೆ ದೊರೆತಿರುವ ಖಾತೆಗಳು ಸಮುದಾಯದ ಅಭಿವೃದ್ಧಿಗೆ ಪೂರಕವಾಗಿಲ್ಲ. ಹೀಗಾಗಿ, ಪ್ರಭಾವಿ ಖಾತೆಗಳನ್ನು ನೀಡುವ ಮೂಲಕ ಸಮುದಾಯದ ನಿರೀಕ್ಷೆಯನ್ನು ಈಡೇರಿಸಬೇಕು.
ಪತ್ರಿಕಾಗೋಷ್ಠಿಯಲ್ಲಿ ಗಣ್ಯರ ಉಪಸ್ಥಿತಿ
ಈ ಕುರಿತು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಆದಿಜಾಂಬವ ಮಠದ ಪೀಠಾಧಿಪತಿಗಳಾದ ಶ್ರೀ ಶಿವಮುನಿದೇಶಿಕೇಂದ್ರ ಸ್ವಾಮೀಜಿಯವರ ನೇತೃತ್ವದಲ್ಲಿ ಸಮುದಾಯದ ಮುಖಂಡರು ಪಾಲ್ಗೊಂಡಿದ್ದರು. ರಾಜ್ಯ ಸಂಘಟಕರಾದ ಶಿವಪ್ಪ, ಶ್ರೀಧರ, ಮುತ್ತುರಾಜ, ಪ್ರತಾಪ, ನರಸಿಂಹಮೂರ್ತಿ ,ಕೆ ಎನ ಮುನಿರಾಜು, ಹಾಗೂ ಮಹಿಳಾ ವಿಭಾಗದ ಅಧ್ಯಕ್ಷರಾದ ರಂಜಿತಾ, ನಾಗಲಕ್ಷ್ಮಿ, ಭವಾನಿ, ಮಹಾಲಕ್ಷ್ಮಿ, ಕದ್ರಮ್ಮ ಮತ್ತು ನಲ್ಲಪ್ಪ ಅವರು ಉಪಸ್ಥಿತರಿದ್ದರು. ಜತೆಗೆ, ಎಸ್ಸಿ/ಎಸ್ಟಿ ಆಯೋಗದ ಮಾಜಿ ಅಧ್ಯಕ್ಷರಾದ ಎ. ಮುನಿಯಪ್ಪ, ಚಂದನ ವೈಚಾರಿಕತೆ, ಜಿ. ರವಿ ಕುಮಾರ್, ಎಚ್. ಸಿ. ರಂಗಸ್ವಾಮಿ ಸೇರಿದಂತೆ ವಿವಿಧ ಜಿಲ್ಲೆಗಳ ಸಮಾಜದ ಮುಖಂಡರು ಭಾಗವಹಿಸಿ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು.
ಸಮುದಾಯದ ಆತಂಕ:
ಉತ್ತರ ಕರ್ನಾಟಕ ಭಾಗದಲ್ಲಿ ಸಮರ್ಪಕ ಟಿಕೆಟ್ ಸಿಗದ ಕಾರಣ ಅನೇಕ ಅರ್ಹ ಮಾದಿಗ ನಾಯಕರು ಸ್ಪರ್ಧಿಸಲು ಅವಕಾಶ ವಂಚಿತರಾಗಿದ್ದಾರೆ. ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಹುದ್ದೆಯನ್ನು ಬಲಗೈ ಸಮುದಾಯಕ್ಕೆ ನೀಡಲಾಗಿತ್ತು, ಇದೀಗ ಎಡಗೈ ಮಾದಿಗ ಸಮುದಾಯಕ್ಕೆ ನ್ಯಾಯಯುತ ಪ್ರಾತಿನಿಧ್ಯ ನೀಡುವ ಸರದಿ ಎಂದು ಮುಖಂಡರು ವಾದಿಸಿದ್ದಾರೆ. ಕೆ.ಎಚ್. ಮುನಿಯಪ್ಪ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ನೇಮಿಸಿದರೆ, ಹಿಂದುಳಿದ ಸಮುದಾಯಗಳಲ್ಲಿ ವಿಶ್ವಾಸ ಹೆಚ್ಚುವುದಲ್ಲದೆ, ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಬಲ ಸಿಗಲಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
