Tuesday, August 4, 2026
Homeರಾಜ್ಯಕಾವೇರಿ ಹಿತಾಸಕ್ತಿ ಕಾಪಾಡಲು ರಾಜ್ಯ ಸರ್ಕಾರ ದೃಢ ನಿಲುವು ತಾಳಬೇಕೆಂದು‌ ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ. ವಿಜಯೇಂದ್ರ...

ಕಾವೇರಿ ಹಿತಾಸಕ್ತಿ ಕಾಪಾಡಲು ರಾಜ್ಯ ಸರ್ಕಾರ ದೃಢ ನಿಲುವು ತಾಳಬೇಕೆಂದು‌ ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ಮುಖ್ಯಮಂತ್ರಿ ಗಳು ಕರೆದ ಸರ್ವಪಕ್ಷ ಸಭೆಯಲ್ಲಿ ಒತ್ತಾಯಿಸದರು

ಕಾವೇರಿ ಹಿತಾಸಕ್ತಿ ಕಾಪಾಡಲು ರಾಜ್ಯ ಸರ್ಕಾರ ದೃಢ ನಿಲುವು ತಾಳಬೇಕೆಂದು‌ ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ಮುಖ್ಯಮಂತ್ರಿ ಗಳು ಕರೆದ ಸರ್ವಪಕ್ಷ ಸಭೆಯಲ್ಲಿ ಒತ್ತಾಯಿಸದರು

ಕಾವೇರಿ ಜಲ ವಿವಾದದಲ್ಲಿ ರಾಜ್ಯದ ರೈತರ ಹಿತಾಸಕ್ತಿಯನ್ನು ಯಾವುದೇ ಕಾರಣಕ್ಕೂ ಕಡೆಗಣಿಸಬಾರದು. ಕಾವೇರಿ, ಕಬಿನಿ ಹಾಗೂ ಹೇಮಾವತಿ ಜಲಾಶಯಗಳಲ್ಲಿನ ನೀರಿನ ಲಭ್ಯತೆ, ರಾಜ್ಯದ ಕುಡಿಯುವ ನೀರಿನ ಅಗತ್ಯ ಮತ್ತು ರೈತರ ಹಿತವನ್ನು ಸಮಗ್ರವಾಗಿ ಪರಿಗಣಿಸಿ ರಾಜ್ಯ ಸರ್ಕಾರ ಮುಂದಿನ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಕರ್ನಾಟಕವು “ಡಿಸ್ಟ್ರೆಸ್ ಫಾರ್ಮುಲಾ” ಜಾರಿಗೆ ತರಲು ಪರಿಣಾಮಕಾರಿ ಕ್ರಮ ಕೈಗೊಳ್ಳುವುದು ಅತ್ಯಗತ್ಯವಾಗಿದೆ. ಬರ ಪರಿಸ್ಥಿತಿಯಲ್ಲಿ ನೀರಿನ ಹಂಚಿಕೆಗೆ ಸ್ಪಷ್ಟ ಮತ್ತು ನ್ಯಾಯಸಮ್ಮತವಾದ ಡಿಸ್ಟ್ರೆಸ್ ಫಾರ್ಮುಲಾ ಇಲ್ಲದಿರುವುದು ರಾಜ್ಯಕ್ಕೆ ಅನ್ಯಾಯವಾಗುವi ಪರಿಸ್ಥಿತಿಯನ್ನು ಸೃಷ್ಟಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕಾನೂನು ಹಾಗೂ ಆಡಳಿತಾತ್ಮಕ ಮಟ್ಟದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಂಡು ಕರ್ನಾಟಕದ ಹಕ್ಕುಗಳನ್ನು ಸಮರ್ಥವಾಗಿ ಪ್ರತಿಪಾದಿಸಬೇಕು ಎಂದು ಅವರು ಒತ್ತಾಯಿಸಿದರು.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಸಂಬಂಧಿತ ಸಂಸ್ಥೆಗಳ ಮುಂದೆ ಕರ್ನಾಟಕದ ಪರವಾಗಿ ಬಲವಾದ ವಾದ ಮಂಡಿಸಿ ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ರೈತರ ಹಿತಾಸಕ್ತಿ ಮತ್ತು ರಾಜ್ಯದ ನೀರಿನ ಭದ್ರತೆಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿ ಸರ್ಕಾರ ಕಾರ್ಯನಿರ್ವಹಿಸಬೇಕು ಎಂದು ವಿಜಯೇಂದ್ರ ಹೇಳಿದರು.

ಮೇಕೆದಾಟು ಯೋಜನೆ ವಿಚಾರದಲ್ಲಿಯೂ ರಾಜ್ಯ ಸರ್ಕಾರ ಎಚ್ಚರಿಕೆಯಿಂದ ಹಾಗೂ ದೂರದೃಷ್ಟಿಯಿಂದ ಹೆಜ್ಜೆ ಇಡಬೇಕು. ಯೋಜನೆಯ ಅನುಷ್ಠಾನಕ್ಕೆ ಯಾವುದೇ ಹೊಸ ಅಡೆತಡೆಗಳು ಅಥವಾ ವಿವಾದಗಳು ಉಂಟಾಗದಂತೆ ಸಮನ್ವಯ ಮತ್ತು ಕಾನೂನುಬದ್ಧ ಕ್ರಮಗಳೊಂದಿಗೆ ಯೋಜನೆಯನ್ನು ಮುಂದುವರಿಸುವುದು ಅಗತ್ಯವಾಗಿದೆ ಎಂದು ಅವರು ತಿಳಿಸಿದರು.

ಕರ್ನಾಟಕದ ನೀರಿನ ಹಕ್ಕು, ರೈತರ ಬದುಕು ಮತ್ತು ರಾಜ್ಯದ ಭವಿಷ್ಯದ ಹಿತಾಸಕ್ತಿಯನ್ನು ರಕ್ಷಿಸುವಲ್ಲಿ ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳದೆ ದೃಢ ನಿಲುವು ಪ್ರದರ್ಶಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದರು.

ಹೆಚ್ಚಿನ ಸುದ್ದಿ